ಅಧಿಕಾರ ಸ್ವೀಕಾರ

ಭಾರತದ 31 ನೇ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಜನರಲ್ ಧೀರಜ್ ಸೇಠ್!
ಏಪ್ರಿಲ್ 1 ರಂದು ಉಪ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಅವರು ಪುಣೆ ಮೂಲದ ದಕ್ಷಿಣ ಕಮಾಂಡ್‌ನ ಮುಖ್ಯಸ್ಥರಾಗಿದ್ದರು. ಇದು ಕಳೆದ ವರ್ಷ ಆಪರೇಷನ್ ಸಿಂಧೂರ್ ಸಮಯದಲ್ಲಿ ಉನ್ನತ ಮಟ್ಟದ ಕಾರ್ಯಾಚರಣೆಯ ಸನ್ನದ್ಧತೆಯನ್ನು ಕಾಯ್ದುಕೊಂಡಿತ್ತು.

ಬೆಂಗಳೂರು ಉತ್ತರ ವಿವಿ: ನೂತನ ಕುಲಪತಿಯಾಗಿ ಪ್ರೋ. ಬಿ.ಕೆ ರವಿ ಅಧಿಕಾರ ಸ್ವೀಕಾರ
ಕೋಲಾರ ನಗರದ ಹೊರ ವಲಯದ ಟಮಕ ದಲ್ಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕಚೇರಿಯಲ್ಲಿ ಪ್ರಭಾರ ಕುಲಪತಿಯಾಗಿದ್ದ ಡಾ.ಕುಮುದಾ ಅವರಿಂದ ನಾಲ್ಕನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದರು.

ಜೋಶಿ ಅವಧಿಯಲ್ಲಿ ಹಣ, ದುರ್ಬಳಕೆ ಆರೋಪ: ಕಸಾಪಗೆ ಆಡಳಿತಾಧಿಕಾರಿ ನೇಮಕ, ಕೆ. ಎಂ. ಗಾಯಿತ್ರಿ ಅಧಿಕಾರ ಸ್ವೀಕಾರ
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ಕಳೆದ ಜುಲೈನಲ್ಲಿ ವಿಚಾರಣಾಧಿಕಾರಿಯನ್ನು ನೇಮಕ ಮಾಡಿತ್ತು.

ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವರಾಗಿ ವಿ. ಸೋಮಣ್ಣ ಅಧಿಕಾರ ಸ್ವೀಕಾರ
ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವರಾಗಿ ವಿ.ಸೋಮಣ್ಣ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ನಂತರ ಮಾತನಾಡಿದ ಸಚಿವರು, ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಖಾತೆ ನೀಡಿದ ಪ್ರಧಾನಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ದಾಖಲೆಯ ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಪ್ರಮಾಣ ವಚನ ಸ್ವೀಕಾರ
ಮುಂದಿನ 6 ವರ್ಷಗಳ ಅವಧಿಗೆ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು. ಅಧಿಕಾರ ಕ್ರೆಮ್ಲಿನ್‌ನಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಅವರು ದಾಖಲೆಯ ಐದನೇ ಬಾರಿಗೆ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.

ಸಿಬಿಐ ನೂತನ ನಿರ್ದೇಶಕರಾಗಿ ಪ್ರವೀಣ್ ಸೂದ್ ಅಧಿಕಾರ ಸ್ವೀಕಾರ
ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಗುರುವಾರ ಸಿಬಿಐನ ನೂತನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಎರಡು ವರ್ಷಗಳ ಕಾಲ ಅವರು ಈ ಹುದ್ದೆಯಲ್ಲಿರುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದು ಶಿಕ್ಷೆಯಲ್ಲ: ಕೇಂದ್ರ ಭೂ ವಿಜ್ಞಾನ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಿಜಿಜು
ಕೇಂದ್ರ ಭೂ ವಿಜ್ಞಾನ ಸಚಿವರಾಗಿ ಕಿರಣ್ ರಿಜಿಜು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಅವರನ್ನು ನಿನ್ನೆ ಕಾನೂನು ಮತ್ತು ನ್ಯಾಯ ಸಚಿವಾಲಯದಿಂದ ಮುಕ್ತಗೊಳಿಸಿ, ಭೂ ವಿಜ್ಞಾನ ಸಚಿವಾಲಯಕ್ಕೆ ವರ್ಗಾಯಿಸಲಾಗಿದೆ.

ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ: ಅಭಿನಂದನೆ ಸಲ್ಲಿಸಿದ ಸೋನಿಯಾ ಗಾಂಧಿ
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕಾರ ಸ್ವೀಕಾರ ಮಾಡಿದರು.

ದೇಶದ ಸೇನಾಪಡೆಗಳ ನೂತನ ಮುಖ್ಯಸ್ಥರಾಗಿ ಜನರಲ್ ಅನಿಲ್ ಚೌಹಾಣ್ ಅಧಿಕಾರ ಸ್ವೀಕಾರ
ಮಾಜಿ ಸೇನಾ ಕಮಾಂಡರ್ ಜನರಲ್ ಅನಿಲ್ ಚೌಹಾಣ್ ನೂತನ ಸೇನಾ ಸಿಬ್ಬಂದಿ ಮುಖ್ಯಸ್ಥರಾಗಿ (ಸಿಡಿಎಸ್) ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.

