ರಾಜ್ಯಅರಣ್ಯಗಳಲ್ಲಿ ಹೆಚ್ಚಿದ ಕಾಡ್ಗಿಚ್ಚು: ಅಧಿಕಾರಿಗಳ ಬೆವರಿಳಿಸಿದ ಸಚಿವ ಆನಂದ್ ಸಿಂಗ್
ಸಚಿವ ಆನಂದ್ ಸಿಂಗ್ ರಾಜ್ಯದ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಸಭೆಯಲ್ಲಿ ಕಾಡಿನಲ್ಲಿ ಬೆಂಕಿ, ಅಕ್ರಮ ಬೇಟೆ ಹಾಗೂ ಕೋವಿದ್ 19 ಗಾಗಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಕಾಡಿನಲ್ಲಿ ಹಬ್ಬುವ ಬೆಂಕಿಯ ಬಗ್ಗೆ ಮಾಹಿತಿ ಪಡೆದು ಆಘಾತ ವ್ಯಕ್ತ ಪಡಿಸಿದ ಅವರು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.