ರಾಜ್ಯಅನಧಿಕೃತ ದೇವಾಲಯಗಳ ಸಕ್ರಮಕ್ಕೆ ಖಾಸಗಿ ವಿಧೇಯಕ ಮಂಡಿಸುತ್ತೇನೆ: ಶಾಸಕ ಎಸ್.ಎ.ರಾಮದಾಸ್
ರಾಜ್ಯದಲ್ಲಿರುವ ಅನಧಿಕೃತ ದೇವಾಲಯಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ಸೆ.23ರಂದು ವಿಧಾನಸಭೆಯ ಅಧಿವೇಶನದಲ್ಲಿ ‘ಕರ್ನಾಟಕ ರಾಜ್ಯದಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡ ಹಿಂದೂ ದೇವಾಲಯಗಳ ಕ್ರಮಬದ್ಧಗೊಳಿಸುವಿಕೆಯ ಕಾಯ್ದೆ–2021’ ಎಂಬ ಖಾಸಗಿ ವಿಧೇಯಕವನ್ನು ಮಂಡಿಸಲಿದ್ದೇನೆ ಎಂದು ಶಾಸಕ ಎಸ್.ಎ.ರಾಮದಾಸ್ ಅವರು ಶನಿವಾರ ಹೇಳಿದ್ದಾರೆ.