ಅನುದಾನ

ಕೇಂದ್ರದ ಕೋಟ್ಯಂತರ ರೂ ಅನುದಾನವಿದ್ದರೂ ಪ್ರವಾಸೋದ್ಯಮ ಯೋಜನೆಗಳು ವಿಳಂಬ: ರಾಜ್ಯದ 3 ಯೋಜನೆಗಳಲ್ಲಿ ಶೂನ್ಯ ಪ್ರಗತಿ..!
ರಾಜ್ಯದ ಪ್ರವಾಸೋದ್ಯಮ ವಲಯಗಳ ಹಾಗೂ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ನೀಡಿದ ಉತ್ತರದಲ್ಲಿ ಈ ಮಾಹಿತಿ ಬಹಿರಂಗವಾಗಿದೆ.

ಪದತ್ಯಾಗಕ್ಕೂ ಮುನ್ನ ಕುರುಬ ಸಮುದಾಯಕ್ಕೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್; ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್‌ಗೂ ₹50 ಲಕ್ಷ ಬಿಡುಗಡೆ!
ನೂತನ ಸಿಎಂ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರಕ್ಕೂ ಒಂದು ದಿನ ಮೊದಲೇ ಆರ್ಥಿಕ ಇಲಾಖೆಯು ವಿವಿಧ ಸಂಸ್ಥೆಗಳಿಗೆ ₹71.85 ಕೋಟಿ ಅನುದಾನ ಮಂಜೂರು ಮಾಡಿದೆ.

2 ವರ್ಷಗಳಿಂದ ರಾಜ್ಯಕ್ಕೆ ಹಣ ಬಿಡುಗಡೆ ಮಾಡಿಲ್ಲ, ನಿರ್ಲಕ್ಷ್ಯ ನಡುವೆಯೂ ಅಭಿವೃದ್ಧಿ ಮುಂದುವರೆಸಿದ್ದೇವೆ: ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಕಿಡಿ
ಕೇಂದ್ರ ಸರ್ಕಾರ ಆಯವ್ಯಯದಲ್ಲಿ ಅನುದಾನ ಹಂಚಿಕೆ ಮಾಡಿದ್ದರೂ, ಕಳೆದ ಎರಡು ವರ್ಷಗಳಿಂದ ಕರ್ನಾಟಕಕ್ಕೆ ಹಣ ಬಿಡುಗಡೆಯಾಗಿಲ್ಲ. ಆದರೂ ರಾಜ್ಯ ಸರ್ಕಾರವೇ ಕೇಂದ್ರದ ಪಾಲಿನ ಹಣವನ್ನು ಭರಿಸಿ, ಯೋಜನೆ ಅನುಷ್ಠಾನ ಮುಂದುವರೆಯುವಂತೆ ನೋಡಿಕೊಂಡಿದೆ.

ಎಚ್ಚೆತ್ತ ರಾಜ್ಯ ಸರ್ಕಾರ: ಮಣ್ಣಿನ ಕುಸಿತ ತಡೆಗೆ 99 ಕೋಟಿ ರೂ ಅನುದಾನ; ಉತ್ತರ ಕನ್ನಡ ಜಿಲ್ಲೆಗೆ ವಿಶೇಷ ಪ್ಯಾಕೇಜ್..!
ಕೆಲ ವರ್ಷಗಳ ಹಿಂದೆ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ನಡೆಸಿದ ಅಧ್ಯಯನದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 339ಕ್ಕೂ ಹೆಚ್ಚು ಮಣ್ಣಿನ ಕುಸಿತ ಸಂಭವನೀಯ ಪ್ರದೇಶಗಳನ್ನು ಗುರುತಿಸಲಾಗಿತ್ತು. ಈ ವರದಿ ಸರ್ಕಾರದ ಬಳಿ ಇದ್ದರೂ, ಇದೂವರೆಗೆ ಯಾವುದೇ ಸಮಗ್ರ ಕಾರ್ಯಯೋಜನೆ ರೂಪಿಸಿರಲಿಲ್ಲ.

ಕೃಷ್ಣಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ರೂ ಅನುದಾನ: ಅಭಿವೃದ್ಧಿಗೆ ಹಣವಿಲ್ಲವೆಂಬ BJP ಆರೋಪ ಸತ್ಯಕ್ಕೆ ದೂರ; ಸಿಎಂ ಸಿದ್ದರಾಮಯ್ಯ
ಗುಜರಾತ್‌ನಲ್ಲಿ ನದಿ ನೀರು ಹಂಚಿಕೆ ಕುರಿತು ವ್ಯಾಜ್ಯ ಇದ್ದರೂ, ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಯಿತು. ಪ್ರಧಾನಿ ಮೋದಿ, ಸಚಿವ ಅಮಿತ್ ಷಾ ಅವರು ತಮ್ಮ ಸ್ವಂತ ರಾಜ್ಯಕ್ಕೆ ಮಾಡಿದ ಅನುಕೂಲವನ್ನು ಯುಕೆಪಿ ವಿಷಯದಲ್ಲಿ ಕರ್ನಾಟಕಕ್ಕೆ ಏಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.

VB-G RAM G ಯೋಜನೆಗೆ ಅನುದಾನ ನೀಡದ ಸರ್ಕಾರ: ಅರ್ಥವಿಲ್ಲದ ಬಜೆಟ್ ಎಂದು ಪ್ರಹ್ಲಾದ್ ಜೋಶಿ ಟೀಕೆ
ಈ ಬಜೆಟ್‌ನಲ್ಲಿ ಆರ್ಥಿಕ ವೃದ್ಧಿ ಅಥವಾ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಮೂಲಭೂತ ಪ್ರಸ್ತಾವನೆಗಳಿಲ್ಲ. ಗ್ಯಾರಂಟಿ ಯೋಜನೆಗಳ ಮೇಲೆ ಆಧಾರಿತವಾಗಿ ಸಾಲದ ಹೊರೆ ಹೆಚ್ಚಿಸುವ ಬಜೆಟ್ ಇದಾಗಿದೆ.

ಅನಾಥ ಮಕ್ಕಳ ಕೋಟಿ ಕೋಟಿ ಹಣ ಗುಳಂ: ಸರ್ಕಾರದ ವಿರುದ್ಧ BJP ತೀವ್ರ ಕಿಡಿ
ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಂದ ಅನಾಥರಾದ ಮಕ್ಕಳನ್ನು ರಕ್ಷಿಸುವ ಹೊಣೆ ಸರ್ಕಾರದ ಮೇಲಿದೆ. ಪ್ರತಿ ಮಗುವಿಗೆ ತಿಂಗಳಿಗೆ ಸುಮಾರು ರೂ.4,000 ಸಹಾಯಧನ ನೀಡಲಾಗುತ್ತಿದೆಯಾದರೂ, ಅನುದಾನ ಬಿಡುಗಡೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯ.

ನುಡಿದಂತೆ ನಡೆಯುವುದು ಕಾಂಗ್ರೆಸ್ ಮಾತ್ರ, ಕೇಂದ್ರದಿಂದ ಅನ್ಯಾಯವಾಗುತ್ತಿದ್ದರೂ ಬಿಜೆಪಿ ಸಂಸದರು ತುಟಿ ಪಿಟಿಕ್ ಅನ್ನುತ್ತಿಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ ಕಾಂಗ್ರೆಸ್ ಸರ್ಕಾರದ 1,000 ದಿನಗಳ ಆಡಳಿತ ಪೂರ್ಣಗೊಂಡ ಹಿನ್ನೆಲೆಯಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಹಾವೇರಿ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಕರ್ನಾಟಕವು ಕೇಂದ್ರ ಸರ್ಕಾರಕ್ಕೆ 4.5 ಲಕ್ಷ ಕೋಟಿ ರೂಪಾಯಿ ತೆರಿಗೆ ನೀಡುತ್ತದೆ.

16ನೇ ಹಣಕಾಸು ಆಯೋಗಕ್ಕೆ ಒಪ್ಪಿಗೆ: ರಾಜ್ಯಗಳಿಗೆ 1.4 ಲಕ್ಷ ಕೋಟಿ ರೂ ಅನುದಾನ ಘೋಷಣೆ
ಇತ್ತೀಚೆಗಷ್ಟೇ 16ನೇ ಹಣಕಾಸು ಆಯೋಗವು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿತ್ತು. ಆಯೋಗವು ನೀಡಿದ್ದ ಸಲಹೆ ಮತ್ತು ಶಿಫಾರಸುಗಳನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಅವುಗಳನ್ನು ಅಧಿಕೃತವಾಗಿ ಅಂಗೀಕರಿಸಿದೆ.

