ಬಾಲಿವುಡ್ಬಾಲಿವುಡ್ ನಟ ಅನುಪಮ್ ಖೇರ್ ತಾಯಿ, ಕುಟುಂಬ ಸದಸ್ಯರಿಗೆ ಕೊರೋನಾ!
ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಅವರ ತಾಯಿ ದುಲಾರಿ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ. ಈ ಕುರಿತು ಅನುಪಮ್ ಖೇರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಧ್ಯ ನಟನ ತಾಯಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.