ಅನ್ನಭಾಗ್ಯ

ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ಬಂದ್! Ration Card e-KYC ಮಾಡಿಸದಿದ್ರೆ ಏನೆಲ್ಲಾ ಬಂದ್ ಆಗುತ್ತೆ ಗೊತ್ತಾ?
ರಾಜ್ಯದಲ್ಲಿ ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇಲಾಖೆ ನಿಗದಿಪಡಿಸಿದ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಸರ್ಕಾರದಿಂದ ಸಿಗುವ ಹಲವು ಪ್ರಮುಖ ಸೌಲಭ್ಯಗಳು ಸ್ಥಗಿತಗೊಳ್ಳಲಿವೆ. ಆ ಕುರಿತ ವರದಿ ಇಲ್ಲಿದೆ:

ಅನ್ನಭಾಗ್ಯ ಅಕ್ಕಿ ಹಗರಣ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ..!
ತನಿಖೆಯ ವೇಳೆ ಬೆಳಕಿಗೆ ಬಂದಿರುವ ಪ್ರಾಥಮಿಕ ಅಕ್ರಮಗಳು, ಅವ್ಯವಹಾರಗಳು ಹಾಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಕಾರ್ಯವೈಖರಿಯನ್ನು ಸುಧಾರಿಸಲು ಅಗತ್ಯ ಕ್ರಮಗಳ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಆಗಸ್ಟ್ 20ರೊಳಗೆ ಲೋಕಾಯುಕ್ತಕ್ಕೆ ಸಲ್ಲಿಸಲು ಸಮಿತಿಗೆ ಸೂಚಿಸಲಾಗಿದೆ.

ಬಡವರ ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ಕಳ್ಳಸಾಗಣೆ; ಮಹಾರಾಷ್ಟ್ರ ಮಾರ್ಗವಾಗಿ ದುಬೈ, ಸಿಂಗಾಪುರಕ್ಕೆ ರವಾನೆ!
ಅಕ್ಕಿ ಸಾಗಣೆಗಾಗಿ ಬಳಸಲಾಗುತ್ತಿದ್ದ ದಾಖಲೆಗಳು ನಕಲಿಯಾಗಿದ್ದು, ಹಾವೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ನಕಲಿ ಮುದ್ರೆಯನ್ನು ಬಳಸಿ ದಾಖಲೆಗಳನ್ನು ಸಿದ್ಧಪಡಿಸಲಾಗಿತ್ತು.

ಬೆಂಗಳೂರು: ಅನ್ನಭಾಗ್ಯ ಗೋದಾಮುಗಳಲ್ಲಿ ಲೋಕಾಯುಕ್ತ, ಉಪ ಲೋಕಾಯುಕ್ತರ ತಪಾಸಣೆ; ಅಕ್ರಮ ಪತ್ತೆ
ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹಾಗೂ ಉಪಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನ 22 ಹಾಗೂ ಬೆಂಗಳೂರು ಗ್ರಾಮಾಂತರದ 5 ಸೇರಿದಂತೆ ಒಟ್ಟು 27 ಕಡೆಗಳಲ್ಲಿ ದಾಳಿ ನಡೆಸಿದರು.

ರಾಜ್ಯದ ಅನ್ನಭಾಗ್ಯ ಅಕ್ಕಿ ದುಬೈ-ಸಿಂಗಾಪುರದಲ್ಲಿ ಮಾರಾಟ..?
ಬಡವರಿಗೆಂದು ಕೊಡಲ್ಪಡುವ ಅಕ್ಕಿ ಬಡವರ ಮನೆ ತಲುಪುತ್ತಿಲ್ಲ. ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟದ ಕುರಿತು ಎಷ್ಟು ಪ್ರಕರಣಗಳನ್ನು ದಾಖಲಿಸಲಾಗಿದೆ? ಅಕ್ರಮಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಯಾವ ಕ್ರಮ ಕೈಗೊಂಡಿದೆ?

ಅನ್ನಭಾಗ್ಯ ಯೋಜನೆ: ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲು ಇಂದಿರಾ ಕಿಟ್ ನೀಡಲು ಸರ್ಕಾರ ಮುಂದು..!
ಹಸಿವಿನ ನೋವು, ಅಕ್ಕಿಯ ಮೌಲ್ಯ ನನಗೆ ತಿಳಿದಿದೆ, ಅದಕ್ಕಾಗಿಯೇ ಅನ್ನ ಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು. ನಗರದಲ್ಲಿ ಆಹಾರ ವ್ಯರ್ಥ ಹೆಚ್ಚುತ್ತಿರುವುದು ದುರದೃಷ್ಟಕರ ಸಂಗತಿ.

ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳ ವಿತರಣೆ: ರಾಜ್ಯ ಸರ್ಕಾರ
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ವಹಿಸಬೇಕು.

ಜಗತ್ತಿನಲ್ಲಿ ಸೂರ್ಯ-ಚಂದ್ರರಿರುವುದು ಎಷ್ಟು ಸತ್ಯವೋ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿರುವುದೂ ಅಷ್ಟೇ ಸತ್ಯ..!!
ಈಗ ಶಾಲಾ ಮಕ್ಕಳಿಗೆ ಶೂ ಹಾಗೂ ಸಾಕ್ಸ್ ನೀಡಲು ಸಹ ಸರ್ಕಾರದ ಬಳಿ ದುಡ್ಡಿಲ್ಲ ಎಂಬುದು ವರದಿಯಾಗಿದೆ. ಮಕ್ಕಳಿಗೆ ಶೂ ಹಾಗೂ ಸಾಕ್ಸ್ ನೀಡಲು ಯಾರಾದರೂ ದಾನಿಗಳು ಸಿಗುತ್ತಾರಾ ಎಂದು ಚಾತಕಪಕ್ಷಿ ರೀತಿ ಹುಡುಕುತ್ತಿದೆ.

ಅನ್ನ ಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಬಾಕಿ ಹಣ ನೀಡದ ಸರ್ಕಾರ: ಅನಿರ್ದಿಷ್ಟಾವಧಿ ಲಾರಿ ಮುಷ್ಕರ
ಫೆಬ್ರವರಿಯಿಂದ ಹಣ ಪಾವತಿ ಮಾಡಲಾಗಿಲ್ಲ ಎಂದು ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್‌ಗಳ ಸಂಘ ಮತ್ತು ಚಿಲ್ಲರೆ ಸಾರಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಹೇಳಿದ್ದಾರೆ.

