ದೇಶಡಬ್ಲ್ಯುಎಫ್ಐ ಮುಖ್ಯಸ್ಥರ ವಿರುದ್ಧದ ಲೈಂಗಿಕ ಕಿರುಕುಳ ಆರೋಪದಿಂದ ಹಿಂದೆ ಸರಿದಿಲ್ಲ: ಅಪ್ರಾಪ್ತ ಕುಸ್ತಿಪಟುವಿನ ತಂದೆ
ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪವನ್ನು ಹೊರಿಸಿದ 17 ವರ್ಷದ ಕುಸ್ತಿಪಟುವಿನ ತಂದೆ ಭಾನುವಾರ ತಡರಾತ್ರಿ ತಾನು ಆರೋಪದಿಂದ ಹಿಂದೆ ಸರಿದಿಲ್ಲ ಎಂದು ಪ್ರತಿಪಾದಿಸಿದ್ದಾರೆ.