ಅಫಘಾತ

ಸೌದಿಯಲ್ಲಿ ಬಸ್-ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ; Video
ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ಭಕ್ತರನ್ನು ಕರೆದೊಯ್ಯಲಾಗುತ್ತಿತ್ತು. ದುರಂತದ ಸಮಯದಲ್ಲಿ ಸುಮಾರು 20 ಮಹಿಳೆಯರು ಮತ್ತು 11 ಮಕ್ಕಳು ಬಸ್ಸಿನಲ್ಲಿದ್ದರು.

ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಹಿಟ್ ಅಂಡ್ ರನ್ ಪ್ರಕರಣ: ಎಸ್‌ಯುವಿ ಚಾಲಕನ ಬಂಧನ
ಜಲಂಧರ್ ಜಿಲ್ಲೆಯ ಕರ್ತಾರ್‌ಪುರದ ದಾಸುಪುರ ನಿವಾಸಿ ಅಮೃತ್‌ಪಾಲ್ ಸಿಂಗ್ ಧಿಲ್ಲೋನ್ (26) ಅವರನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದ್ದು, ವಾಹನವನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು: ಅಡ್ಡಾದಿಡ್ಡಿ ಕಾರು ಚಾಲನೆ, ಪಿಯು ವಿದ್ಯಾರ್ಥಿ ಸೇರಿ ಇಬ್ಬರ ದುರ್ಮರಣ
ಅಡ್ಡಾದಿಡ್ಡಿ ಚಾಲನೆ ಮಾಡಿಕೊಂಡು ಬಂದ ಕಾರು ಚಾಲಕ ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ವಾಹನಕ್ಕೆ ಗುದ್ದಿದ ಪರಿಣಾಮ ಪಿಯು ವಿದ್ಯಾರ್ಥಿ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ಮಡಿವಾಳ ಸಂಚಾರಿ ಠಾಣೆ ವ್ಯಾಪ್ತಿಯ ಸಿಲ್ಕ್ ಬೋರ್ಡ್ ಬಳಿ ನಡೆದಿದೆ.

ಕಲಬುರಗಿ: ಕಾರಿಗೆ ಲಾರಿ ಡಿಕ್ಕಿ, ಇಬ್ಬರು ಸಾವು
ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಕುದ್ರಿಮೋದಿ ಕ್ರಾಸ್ ಬಳಿ ಸಂಭವಿಸಿದೆ.

