ದೇಶಅಬಕಾರಿ ನೀತಿ ಅನುಷ್ಠಾನದಲ್ಲಿ ಲೋಪ; 11 ಅಧಿಕಾರಿಗಳನ್ನು ಅಮಾನತುಗೊಳಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್
ಅಬಕಾರಿ ನೀತಿ 2021-22ರ ಅನುಷ್ಠಾನದಲ್ಲಿ ಗಂಭೀರ ಲೋಪ ಎಸಗಿರುವ ಆರೋಪದ ಮೇರೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ದೆಹಲಿಯ ಅಂದಿನ ಅಬಕಾರಿ ಆಯುಕ್ತ ಅರವ ಗೋಪಿ ಕೃಷ್ಣ ಮತ್ತು ಉಪ ಅಬಕಾರಿ ಆಯುಕ್ತ ಆನಂದ್ ಕುಮಾರ್ ತಿವಾರಿ ಸೇರಿದಂತೆ 11 ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.