ಅಭಿನವ ಹಾಲಶ್ರೀ

ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡಬೇಕು, ಮುಂದೊಂದು ದಿನ ಈ ಪ್ರಕರಣ ಬಗ್ಗೆ ಮಾತನಾಡುತ್ತೇನೆ: ಅಭಿನವ ಹಾಲಶ್ರೀ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿದ ಹಿಂದೂಪರ ಕಾರ್ಯಕರ್ತೆ ಚೈತ್ರಾ ಗ್ಯಾಂಗ್ನಿಂದ ಉದ್ಯಮಿಗೆ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅಭಿನವ ಹಾಲಶ್ರೀ ಬಿಡುಗಡೆಯಾಗಿದ್ದಾರೆ.

ವಂಚನೆ ಪ್ರಕರಣ: ಅಭಿನವ ಹಾಲಶ್ರೀಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು
ಉದ್ಯಮಿಗೆ ಬಹುಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಶ್ರೀಗೆ ಕರ್ನಾಟಕ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

ಅಭಿನವ ಹಾಲಸ್ವಾಮಿಯನ್ನು ಸ್ಥಳ ಮಹಜರು ಮಾಡಲು ಕರೆತಂದಿದ್ದ ವೇಳೆ ಮಠದಲ್ಲಿ ಕಂತೆ ಕಂತೆ ಹಣ ಪತ್ತೆ!
ಬಳ್ಳಾರಿ ಜಿಲ್ಲೆಯ ಹೊಸಪೇಟೆ ಸಮೀಪದ ಹಿರೇಹಡಗಲಿಯ ಹಾಲಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಅಭಿನವ ಹಾಲಸ್ವಾಮಿಯನ್ನು ಬಂಧಿಸಿದ ಒಂದು ದಿನದ ನಂತರ ನಿನ್ನೆ ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ಸ್ಥಳ ಮಹಜರಿಗೆ ಹೋಗಿದ್ದ ಸಂದರ್ಭದಲ್ಲಿ ಲಕ್ಷ ಲಕ್ಷ ಕಂತೆ ನೋಟು ಸಿಕ್ಕಿದೆ.

ಸೆಪ್ಟಂಬರ್ 29 ರವರೆಗೆ ಅಭಿನವ ಹಾಲಶ್ರೀ ಸಿಸಿಬಿ ಕಸ್ಟಡಿಗೆ: ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯ ಆದೇಶ
ಗೋವಿಂದ ಬಾಬು ರಾಜು ಎಂಬ ಉದ್ಯಮಿಗೆ ಸುಮಾರು 5 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು ಸೆ.29ರವರೆಗೆ 10 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಒಡಿಶಾದಲ್ಲಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ
ಬಿಜೆಪಿ ಟಿಕೆಟ್ ಹಗರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಪೊಲೀಸ್ ನ ಅಪರಾಧ ನಿಗ್ರಹ ದಳದ ಪೊಲೀಸರು ಒಡಿಶಾದಲ್ಲಿ ವಶಕ್ಕೆ ಪಡೆದಿದ್ದಾರೆ.

