ರಾಜ್ಯಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ 10 ಕಿ.ಮೀ ವ್ಯಾಪ್ತಿಯಲ್ಲಿ ಅಭಿವೃದ್ಧಿ ಚಟುವಟಿಕೆಗೆ ತಡೆ ನೀಡಿದ ಹೈಕೋರ್ಟ್
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ (ಬಿಎನ್ಪಿ) 10 ಕಿ.ಮೀ ವ್ಯಾಪ್ತಿಯಲ್ಲಿ “ನಿರೀಕ್ಷಿತ” ವಾಣಿಜ್ಯ ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ನಿರ್ಬಂಧಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.್ ಗುರುವಾರ ಈ ಸಂಬಂಧ ಮಧ್ಯಂತರ ಆದೇಶಾ ಹೊರಡಿಸಿದ್ದ ಹೈಕೋರ್ಟ್ ಈಗಾಗಲೇ ಕೈಗೊಂಡ ವಾಣಿಜ್ಯ ಮತ್ತು ಅಭಿವೃದ್ಧಿ ಚಟುವಟಿಕೆಗಳ ಮೇಲೆ ಈ ಆದೇಶ ಅನ್ವಯಿಸುವುದಿಲ್ಲ ಎಂದೂ ಹೇಳಿದೆ.