ದೇಶಗದ್ದಲದ ನಡುವೆ ರಾಜ್ಯಸಭೆ-ಲೋಕಸಭೆ ಮಧ್ಯಾಹ್ನ 2ಕ್ಕೆ ಮುಂದೂಡಿಕೆ; ಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಅಮಾನತು ಹಿಂದಕ್ಕೆ
ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆಗೆ ವಿರೋಧ ಪಕ್ಷಗಳು ಪಟ್ಟುಹಿಡಿದಿದ್ದರೆ, ಆಡಳಿತ ಪಕ್ಷದ ಸದಸ್ಯರು ರಾಜಸ್ಥಾನದಲ್ಲಿನ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಚಾರ ಪ್ರಸ್ತಾಪಿಸಲು ಪ್ರಯತ್ನಿಸಿದ ನಡುವೆಯೇ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.