ರಾಜ್ಯಪೋಸ್ಟಿಂಗ್ಗೆ ಹಣ: ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಾವು ಪ್ರಕರಣದ ತನಿಖೆ ಡಿಜಿಪಿಗೆ; ಸಿಎಂ ಬಸವರಾಜ ಬೊಮ್ಮಾಯಿ
ಅಮಾನತುಗೊಂಡ ಪೊಲೀಸ್ ಇನ್ಸ್ಪೆಕ್ಟರ್ ಸಾವಿನ ಪ್ರಕರಣದ ಕುರಿತು ಗಮನ ಹರಿಸುವಂತೆ ಮತ್ತು ಅಗತ್ಯವಿದ್ದರೆ ತನಿಖೆ ನಡೆಸುವಂತೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.