ರಾಜ್ಯಕಾಂಗ್ರೆಸ್ ವಿರುದ್ಧದ ಆಕ್ಷೇಪಾರ್ಹ ಅನಿಮೇಟೆಡ್ ವಿಡಿಯೋ: ನಡ್ಡಾ, ಮಾಳವಿಯಾ ವಿರುದ್ಧದ ತನಿಖೆಗೆ 'ಹೈ' ಅನುಮತಿ
ಕಲಬುರ್ಗಿಯ ಸೈಬರ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಬಿಜೆಪಿ ಮುಖಂಡ ಜಗತ್ ಪ್ರಕಾಶ್ ನಡ್ಡಾ ಮತ್ತು ಮಾಳವಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ನಡೆಸಿತು.