ರಾಜ್ಯಅರಣ್ಯ ಒತ್ತುವರಿ: ಉಪಗ್ರಹ ಆಧಾರಿತ ಎಚ್ಚರಿಕೆ ವ್ಯವಸ್ಥೆ ರೂಪಿಸಲು ಖಂಡ್ರೆ ಸೂಚನೆ
ರಾಜ್ಯದ ಅರಣ್ಯ ಸಂಪತ್ತಿನ ಸಂರಕ್ಷಣೆ ಮತ್ತು ಅರಣ್ಯ ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಅಗತ್ಯವಿದ್ದು, ಉಪಗ್ರಹ ಆಧಾರಿತ ಎಚ್ಚರಿಕೆ ರವಾನೆ ವ್ಯವಸ್ಥೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.