ರಾಜ್ಯಹಾಸನ ಪಶ್ಚಿಮ ಘಟ್ಟದಲ್ಲಿ ಕಾಡ್ಗಿಚ್ಚು: ಶೇ.40ರಷ್ಟು ಗಾಯಗೊಂಡಿದ್ದರೂ ಸಹಾಯಕ್ಕಾಗಿ 4 ಕಿಮೀ ನಡೆದಿದ್ದ ಅರಣ್ಯ ವೀಕ್ಷಕ!
ಫೆಬ್ರವರಿ 16 ರಂದು ಸಕಲೇಶಪುರದಲ್ಲಿ ಕಾಡ್ಗಿಚ್ಚು ನಂದಿಸಲು ಹೋಗಿ ಶೇ 40ರಷ್ಟು ಸುಟ್ಟ ಗಾಯಕ್ಕೆ ಒಳಗಾಗಿದ್ದ ಅರಣ್ಯ ವೀಕ್ಷಕ ತುಂಗೇಶ್ ಡಿಎಂ (37) ಅವರು, ಸಹಾಯ ಪಡೆದುಕೊಳ್ಳಲು ಸುಮಾರು 4 ಕಿಮೀ ದೂರ ನಡೆದಿದ್ದರು ಎಂಬ ಮಾಹಿತಿ ಇದೀಗ ತಿಳಿದುಬಂದಿದೆ.