ಅಶ್ವತ್ಥ್ ನಾರಾಯಣ

ಇದು ಎಟಿಎಂ ಸರ್ಕಾರ...: ಕಾಂಗ್ರೆಸ್ ವಿರುದ್ಧ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ವಾಗ್ದಾಳಿ
ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಬೆಂಗಳೂರು ನಗರದ ಗುತ್ತಿಗೆದಾರರೊಬ್ಬರ ಮನೆಯಲ್ಲಿ 42 ಕೋಟಿ ರೂಪಾಯಿ ಪತ್ತೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಿಜೆಪಿ ಶಾಸಕ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದು ಇದು ATM ಸರ್ಕಾರ ಎಂಬುದು ಜಗಜ್ಜಾಹೀರಾಗಿದೆ ಎಂದು ಹೇಳಿದ್ದಾರೆ.

ಬಿಎಂಎಸ್ ಟ್ರಸ್ಟ್ ಅಕ್ರಮದಲ್ಲಿ ಸಚಿವ ಅಶ್ವತ್ಥ್ ನಾರಾಯಣ ಕೈವಾಡ: ತನಿಖೆಗೆ ಜೆಡಿಎಸ್ ಆಗ್ರಹ!
ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್‌ನ ಅಕ್ರಮಗಳಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ಥ್‌ನಾರಾಯಣ ಭಾಗಿಯಾಗಿದ್ದು ಅವರು ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.

ಯುವಿಸಿಇ ಆಡಳಿತ ಮಂಡಳ ಅಧ್ಯಕ್ಷರಾಗಿ ಮುತ್ತುರಾಮನ್ ನೇಮಕ
ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ(ಯುವಿಸಿಇ) ಆಡಳಿತ ಮಂಡಳಿಯ ಮುಖ್ಯಸ್ಥರಾಗಿ ಮುತ್ತುರಾಮನ್ ಅವರನ್ನು ನೇಮಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಕೊರೋನಾಗೆ ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಉಚಿತವಾಗಿ ನೀಡುವ ಕುರಿತು ಚಿಂತನೆ: ರಾಜ್ಯ ಸರ್ಕಾರ
ಕೊರೋನಾ ವೈರಸ್'ಗೆ ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಉಚಿತವಾಗಿ ನೀಡುವ ಕುರಿತು ಚಿಂತನೆಗಳನ್ನು ನಡಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಸಿಎನ್.ಅಶ್ವತ್ಥ್ ನಾರಾಯಣ್ ಅವರು ಶುಕ್ರವಾರ ಹೇಳಿದ್ದಾರೆ.

ರಾಜ್ಯದಲ್ಲಿ ಶೀಘ್ರದಲ್ಲೇ ಸೈಬರ್ ಸುರಕ್ಷತಾ ನೀತಿ: ಡಿಸಿಎಂ ಅಶ್ವತ್ಥ್ ನಾರಾಯಣ
ತಂತ್ರಜ್ಞಾನ ಬೆಳವಣಿಗೆಯಿಂದ ಡಿಜಿಟಲ್ ವ್ಯವಹಾರಗಳು ಜಾಸ್ತಿಯಾಗುವ ಜೊತೆ ಸೈಬರ್ ಅಪರಾಧಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೈಬರ್ ಸುರಕ್ಷತಾ ಕಾರ್ಯನೀತಿ ರೂಪಿಸಲು ಸರ್ಕಾರ ಚಾಲನೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಐಟಿ,ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ರಾಜ್ಯದ ಜಿಡಿಪಿ 500 ಶತಕೋಟಿ ಡಾಲರ್ ಗೆ ಏರಿಸಲು ಕೈಗಾರಿಕೋದ್ಯಮಿಗಳಿಗೆ ಸರ್ವಸಹಕಾರ : ಡಾ. ಸಿ.ಎನ್. ಅಶ್ವತ್ಥ ನಾರಾಯಣ
ಮುಂದಿನ 6 ವರ್ಷಗಳಲ್ಲಿ ರಾಜ್ಯವನ್ನು ’ನವ ಕರ್ನಾಟಕ’ವನ್ನಾಗಿ ರೂಪಿಸುವುದೂ ಸೇರಿದಂತೆ, ರಾಜ್ಯದ ಜಿಡಿಪಿ ಪ್ರಮಾಣವನ್ನು 230 ರಿಂದ 500 ಶತಕೋಟಿ ಡಾಲರ್ ಗೆ ಹೆಚ್ಚಿಸುವ ಉದ್ದಿಮೆದಾರರ ಕನಸಿಗೆ ಸರಕಾರ ಸರ್ವರೀತಿಯ ಸಹಕಾರ ನೀಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಆಶ್ವತ್ಥನಾರಾಯಣ ಹೇಳಿದ್ದಾರೆ.

ದೆಹಲಿ ಫಲಿತಾಂಶ ಪ್ರಧಾನಿ ಮೋದಿ ಜನಪ್ರಿಯತೆ ಕಳೆದುಕೊಳ್ಳುವ ಪ್ರತಿಬಿಂಬವಲ್ಲ: ಡಿಸಿಎಂ
ದೆಹಲಿ ಚುನಾವಣಾ ಫಲಿತಾಂಶ ಹಿಡಿದು ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿರುವ ವಿರೋಧ ಪಕ್ಷಗಳ ನಾಯಕರಿದೆ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥ್ ನಾರಾಯಣ್ ಅವರು ತಿರುಗೇಟು ನೀಡಿದ್ದಾರೆ.

