ದೇಶನಾಸಿಕ್ ನ ಆಸ್ಪತ್ರೆಯಲ್ಲಿ ಆಮ್ಲಜನಕ ಸೋರಿಕೆ ದುರಂತ: ಮುಂಬೈ ಹೈಕೋರ್ಟ್ ನಿಂದ ಸ್ವಯಂಪ್ರೇರಿತ ಅರ್ಜಿ ದಾಖಲು
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಾಗಿ ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 22 ರೋಗಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮುಂಬೈ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.