ರಾಜ್ಯಸಂಪನ್ಮೂಲ ಕ್ರೋಡೀಕರಣಕ್ಕೆ ಅಕ್ರಮ-ಸಕ್ರಮ ಮರು ಜಾರಿಗೆ ನಿರ್ಧಾರ: 35 ಲಕ್ಷ ಕಟ್ಟಡಗಳ ಸಕ್ರಮಕ್ಕೆ ತೀರ್ಮಾನ
ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ನಿರ್ಮಿಸಿರುವ ಸುಮಾರು 35 ಲಕ್ಷಕ್ಕೂ ಹೆಚ್ಚಿನ ಕಟ್ಟಡಗಳನ್ನು ಅಕ್ರಮ–ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೋವಿಡ್–19 ನಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಈ ಮೂಲಕ ಆದಾಯ ಸಂಗ್ರಹಿಸಲು ಮುಂದಾಗಿದೆ.