ರಾಜ್ಯಜನಸೇವಕ ವ್ಯಾಪ್ತಿಗೆ ಆಧಾರ್, ಎಪಿಎಲ್, ವೋಟರ್ ಐಡಿ ನೋಂದಣಿ: ಸುರೇಶ್ ಕುಮಾರ್
ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಯಾದಿಗೆ ಹೆಸರು, ನೋಂದಣಿ ಸೇವೆಗಳನ್ನು ಸಕಾಲ ಸ್ಕೀಂನ ಜನಸೇವಕ ಯೋಜನೆಯಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿದ್ದು, ಇಷ್ಟರಲ್ಲಿಯೇ ಈ ಸೇವೆಗಳನ್ನು ಜನಸೇವಕ ವ್ಯಾಪ್ತಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.