ರಾಜ್ಯಆನೆ ದಾಳಿಗೆ ಮೃತಪಟ್ಟ ಕೇರಳದ ವ್ಯಕ್ತಿ ಕುಟುಂಬಕ್ಕೆ ಪರಿಹಾರ; ಅರಣ್ಯ ಸಚಿವರ ವಿರುದ್ಧ ಅಧಿಕಾರಿಗಳು, ತಜ್ಞರು ಅಸಮಾಧಾನ
ಕೇರಳದಲ್ಲಿ ಆನೆ ದಾಳಿಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ವಯನಾಡು ಸಂಸದ ರಾಹುಲ್ ಗಾಂಧಿ ಅವರಿಗೆ ಬರೆದಿರುವ ಪತ್ರವನ್ನು ಇಲಾಖೆ ಅಧಿಕಾರಿಗಳು ಮತ್ತು ತಜ್ಞರು ಪ್ರಶ್ನಿಸಿದ್ದಾರೆ.