ಆಪರೇಷನ್ ಅಜಯ್

ಆಪರೇಷನ್ ಅಜಯ್; ಇಸ್ರೇಲ್‌ನಿಂದ ದೆಹಲಿಗೆ ಬಂದಿಳಿದ ಇಬ್ಬರು ನೇಪಾಳೀಯರು ಸೇರಿ 143 ಭಾರತೀಯರು!
'ಆಪರೇಷನ್ ಅಜಯ್' ಕಾರ್ಯಾಚರಣೆ ಭಾಗವಾಗಿ ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಇಸ್ರೇಲ್ ತೊರೆಯಲು ಬಯಸಿದ್ದ ಇಬ್ಬರು ನೇಪಾಳದ ನಾಗರಿಕರು ಮತ್ತು ನಾಲ್ಕು ಶಿಶುಗಳು ಸೇರಿದಂತೆ 143 ಮಂದಿ ಭಾರತೀಯರನ್ನು ಹೊತ್ತ ವಿಶೇಷ ವಿಮಾನವು ಭಾನುವಾರ ದೆಹಲಿಗೆ ಬಂದಿಳಿದಿದೆ.

ಆಪರೇಷನ್ ಅಜಯ್: ಇಸ್ರೇಲ್‌ನಿಂದ 18 ನೇಪಾಳಿಗರು, 286 ಭಾರತೀಯರನ್ನು ಹೊತ್ತ 5ನೇ ವಿಮಾನ ದೆಹಲಿಯತ್ತ!
ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಇಸ್ರೇಲ್ ತೊರೆಯುವ ಇಚ್ಛೆ ವ್ಯಕ್ತಪಡಿಸಿದ ಭಾರತೀಯ ನಾಗರಿಕರು ಮತ್ತು 18 ನೇಪಾಳಿ ಪ್ರಜೆಗಳನ್ನು ಹೊತ್ತ ವಿಶೇಷ ವಿಮಾನ 'ಆಪರೇಷನ್ ಅಜಯ್' ಅಡಿಯಲ್ಲಿ ಭಾರತಕ್ಕೆ ತೆರಳಿದೆ.

ಇಸ್ರೇಲ್-ಹಮಾಸ್ ಯುದ್ಧ; ಆಪರೇಷನ್ ಅಜಯ್ ಅಡಿ 471 ಭಾರತೀಯರನ್ನು ಕರೆತಂದ ಎರಡು ವಿಮಾನಗಳು!
ಒಟ್ಟು 471 ಭಾರತೀಯರನ್ನು ಹೊತ್ತು ಟೆಲ್ ಅವಿವ್‌ನಿಂದ ಹೊರಟ ಎರಡು ವಿಮಾನಗಳು ಭಾನುವಾರ ಬೆಳಗ್ಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಸುರಕ್ಷಿತವಾಗಿ ಬಂದಿಳಿದಿವೆ. ಏರ್ ಇಂಡಿಯಾ ಮತ್ತು ಸ್ಪೈಸ್ ಜೆಟ್‌ನ ವಿಮಾನಗಳು ಇಸ್ರೇಲ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತಂದಿವೆ.

ಆಪರೇಷನ್ ಅಜಯ್: ಇಸ್ರೇಲ್ ನಿಂದ 2ನೇ ವಿಮಾನದಲ್ಲಿ ನವದೆಹಲಿಗೆ ಬಂದಿಳಿದ 235 ಭಾರತೀಯರು!
ಇಸ್ರೇಲ್-ಹಮಾಸ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ, ಇಸ್ರೇಲ್‌ನಿಂದ 235 ಭಾರತೀಯ ಪ್ರಜೆಗಳನ್ನು ಕರೆತರುವ 2ನೇ ವಿಮಾನ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ನಿನ್ನೆ ಆಪರೇಷನ್ ಅಜಯ್ ಕಾರ್ಯಾಚರಣೆಯಡಿ 212 ಭಾರತೀಯ ಪ್ರಜೆಗಳನ್ನು ಸಂಘರ್ಷ ಪೀಡಿತ ದೇಶದಿಂದ ಸ್ವದೇಶಕ್ಕೆ ಮರಳಿ ಕರೆತರಲಾಯಿತು.

ಆಪರೇಷನ್ ಅಜಯ್: ಯುದ್ಧ ಪೀಡಿತ ಇಸ್ರೇಲ್ ನಿಂದ ನವದೆಹಲಿಗೆ ಬಂದಿಳಿದ 212 ಭಾರತೀಯರಿದ್ದ ಮೊದಲ ವಿಮಾನ
ಇಸ್ರೇಲ್-ಹಮಾಸ್ ಯುದ್ಧದ ಹಿನ್ನೆಲೆಯಲ್ಲಿ ಇಸ್ರೇಲ್‌ನಿಂದ 212 ಭಾರತೀಯರಿದ್ದ ಮೊದಲ ವಿಮಾನ ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಯಶಸ್ವಿಯಾಗಿ ಬಂದಿಳಿಯಿತು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಆಪರೇಷನ್ ಅಜಯ್: ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್‌ನಿಂದ ಟೇಕಾಫ್
ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಆಪರೇಷನ್ ಅಜಯ್ ಆರಂಭಿಸಿದ್ದು, ಮೊದಲ ಚಾರ್ಟರ್ ಫ್ಲೈಟ್ ಗುರುವಾರ ರಾತ್ರಿ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಹೊರಡಲಿದೆ ಎಂದು ಮೂಲಗಳು ತಿಳಿಸಿವೆ.

ಯುದ್ಧ ಪೀಡಿತ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು 'ಆಪರೇಷನ್ ಅಜಯ್' ಘೋಷಣೆ
ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ದೇಶಕ್ಕೆ ಕರೆತರಲು ಆಪರೇಷನ್ ಅಜಯ್ ಪ್ರಾರಂಭಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಬುಧವಾರ ಹೇಳಿದ್ದಾರೆ.

