ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಫೋಟೋ ಎಡಿಟ್ ಮಾಡಿ ಅವಹೇಳನ: ಶಾಸಕ ಆರಗ ಜ್ಞಾನೇಂದ್ರ PA ಬಂಧನ
ಹೊಸನಗರ ತಾಲೂಕಿನ ಮಳಲಿ ಗ್ರಾಮದ ನಿವಾಸಿ ಹಾಗೂ ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿ. ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿಗೆ ಫೆಬ್ರವರಿ 24, 2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಲೈಂಗಿಕ ಕಿರುಕುಳ ಹಗರಣ: ಎಸ್ಐಟಿ ತನಿಖೆ ದಿಕ್ಕು ತಪ್ಪಿದೆ, ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಿ- ಆರಗ ಜ್ಞಾನೇಂದ್ರ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಸೋರಿಕೆ ಪ್ರಕರಣದ ತನಿಖೆಯು ಪಾರದರ್ಶಕವಾಗಿಲ್ಲ ಎಂದು ಆರೋಪಿಸಿರುವ ಮಾಜಿ ಆರೋಗ್ಯ ಸಚಿವ ಆರಗ ಜ್ಞಾನೇಂದ್ರ, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಬ್ರಿಟಿಷರಿಗೆ ಭಾರತ ಉಚ್ಚಾರಣೆ ಕಷ್ಟ ಆಗುತ್ತಿತ್ತು, ಹೀಗಾಗಿ ಇಂಡಿಯಾ ಎಂದರು: ಆರಗ ಜ್ಞಾನೇಂದ್ರ
ಬ್ರಿಟಿಷರಿಗೆ ಭಾರತ ಉಚ್ಚಾರಣೆ ಕಷ್ಟ ಆಗುತ್ತಿತ್ತು. ಹೀಗಾಗಿ ಭಾರತವನ್ನು ಇಂಡಿಯಾ ಎಂದು ಕರೆದರು. ಅದಕ್ಕೆ ಮಹತ್ವ ಇಲ್ಲ ಎಂದು ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ ಅವರು ಬುಧವಾರ ಹೇಳಿದ್ದಾರೆ.

ಆರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ: ಸ್ಪೀಕರ್ ಯು.ಟಿ ಖಾದರ್ ಗೆ ವೀರಶೈವ ಮಹಾಸಭಾ ಆಗ್ರಹ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಮಂಗಳವಾರ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಚೇರಿಗೆ ದೂರು ಸಲ್ಲಿಸಿದೆ.

'ಮಲ್ಲಿಕಾರ್ಜುನ ಖರ್ಗೆ ಕುರಿತ ಆರಗ ಜ್ಞಾನೇಂದ್ರ ಟೀಕೆಯಿಂದ ಆಘಾತಕ್ಕೊಳಗಾಗಿದ್ದೇನೆ': ಕಾಂಗ್ರೆಸ್ ನಾಯಕ ಶಶಿ ತರೂರ್
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತಂತೆ ಬಿಜೆಪಿ ನಾಯಕ ಆರಗ ಜ್ಞಾನೇಂದ್ರ ಮಾಡಿರುವ ಟೀಕೆಗಳಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸಂಸದ ಶಶಿ ತರೂರ್ ಹೇಳಿದ್ದಾರೆ.

ಮನಸಲ್ಲಿದ್ದಿದ್ದು ಖಂಡ್ರೆ, ಬಾಯಿಗೆ ಬಂದಿದ್ದು ಖರ್ಗೆ ಹೆಸರು: ಆರಗ ಜ್ಞಾನೇಂದ್ರ ಸ್ಪಷ್ಟನೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನಾನು ಎಂದಿಗೂ ಅಗೌರವ ತರುವ ಹೇಳಿಕೆ ನೀಡಿಲ್ಲ ಎಂದು ಮಾಜಿ ಗೃಹ ಸಚಿವ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಎಫ್‌ಐಆರ್
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧದ ಆಕ್ಷೇಪಾರ್ಹ ಹೇಳಿಕೆಗಾಗಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಇಲ್ಲಿನ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಇತರೆ ಇಲಾಖೆಯ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
ಎಸ್‌ಸಿ/ಎಸ್‌ಟಿ, ಜಲಸಂಪನ್ಮೂಲ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಇತರೆ ಇಲಾಖೆಯ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿಯ ಹಿರಿಯ ಶಾಸಕ ಆರಗ ಜ್ಞಾನೇಂದ್ರ ಅವರು ಸೋಮವಾರ ಆರೋಪಿಸಿದ್ದಾರೆ.

ಎಬಿವಿಪಿ ನಾಯಕನಿಂದ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಹಂಚಿಕೆ; ಆರಗ ಜ್ಞಾನೇಂದ್ರ ವಿರುದ್ಧ ಕಿಮ್ಮನೆ ವಾಗ್ದಾಳಿ
ಎಬಿವಿಪಿ ನಾಯಕರೊಬ್ಬರು ಕಾಲೇಜು ಯುವತಿಯರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಕುರಿತು ಬಿಜೆಪಿ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ಬುಧವಾರ ವಾಗ್ದಾಳಿ ನಡೆಸಿದ್ದಾರೆ.

