ರಾಜ್ಯಇಬ್ಬರಲ್ಲಿ ಕಾಲರಾ ದೃಢ: ಹಾಸ್ಟೆಲ್ ಖಾಲಿ ಮಾಡಿದ ಮೆಡಿಕಲ್ ವಿದ್ಯಾರ್ಥಿನಿಯರು, ಆರೋಗ್ಯ ಇಲಾಖೆ ಅಲರ್ಟ್!
ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್ಐ) ಬಾಲಕಿಯರ ಹಾಸ್ಟೆಲ್ನ 47 ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ಸೋಂಕು ದೃಢಪಟ್ಟಿದೆ. ಇದರಿಂದ ಆತಂಕಗೊಂಡ ಉಳಿದ ವಿದ್ಯಾರ್ಥಿಗಳು ಹಾಸ್ಟೆಲ್ ಖಾಲಿ ಮಾಡುತ್ತಿದ್ದಾರೆ.