ರಾಜ್ಯರಾಜ್ಯದಲ್ಲಿಂದು ಹೊಸದಾಗಿ 105 ಕೊರೋನಾ ಪ್ರಕರಣ ದೃಢ, 77 ಸೋಂಕಿತರು ಗುಣಮುಖ
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 105 ಹೊಸ ಕೊರೋನಾ ಪ್ರಕರಣ ದೃಢಪಟ್ಟಿದೆ. 77 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಾವಿನ ಸಂಖ್ಯೆ ಶೂನ್ಯವಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 483 ಆಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.