ರಾಜ್ಯಆರ್ ಟಿ ಪಿಸಿಆರ್ ಪರೀಕ್ಷಾ ವರದಿಗೆ 7-10 ದಿನ; ಅಂಗೈಯಲ್ಲಿ ಜೀವ ಹಿಡಿದು ಆತಂಕದಲ್ಲಿ ದಿನದೂಡುತ್ತಿರುವ ಜನ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ ಇತ್ತ ಆರ್ಟಿಪಿಸಿಆರ್ ಪರೀಕ್ಷಾ ಫಲಿತಾಂಶಗಳು ಜನರನ್ನು ತಲುಪಲು 7-10 ದಿನಗಳನ್ನು ತೆಗೆದುಕೊಳ್ಳುತ್ತಿದ್ದು, ಜನರು ತಮ್ಮ ಜೀವವನ್ನು ಅಂಗೈಯಲ್ಲಿ ಹಿಡಿದುಕೊಂಡು ಭೀತಿಯಲ್ಲೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.