ರಾಜ್ಯಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ
ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಸಂಸದ ಆರ್. ಧ್ರುವ ನಾರಾಯಣ ಅವರು ಶನಿವಾರ ಮೃತಪಟ್ಟಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಶನಿವಾರ ಬೆಳಗ್ಗೆ 6.30ರ ವೇಳೆಗೆ ಧ್ರುವನಾರಾಯಣ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.