ರಾಜ್ಯರಾಜ್ಯದಲ್ಲಿ ಇನ್ನೂ ಮೂರು ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ತಿಂಗಳಲ್ಲಿ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ತತ್ತರಿಸಿ ಹೋಗಿದ್ದ ಜನರಿಗೆ ಇದೀಗ ಮತ್ತೆ ವರುಣನ ಭೀತಿ ಎದುರಾಗಿದೆ.