ದೇಶಬಾಬ್ರಿ ಮಸೀದಿ ಧ್ವಂಸ ಪ್ರಕರಣ: 32 ಆರೋಪಿಗಳ ಖುಲಾಸೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲಿದೆ ಎಐಎಂಪಿಎಲ್ಬಿ
1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ 32 ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿರುವುದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ಬಿ) ಸುಪ್ರೀಂ ಕೋರ್ಟ್ ಮೊರೆ ಹೋಗಲಿದೆ ಎಂದು ಮಂಡಳಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.