ರಾಜ್ಯತೆಪ್ಪಕಾಡು ಆನೆ ಶಿಬಿರಕ್ಕೆ ಪ್ರಧಾನಿ ಮೋದಿ ಭೇಟಿ: ಆದಿವಾಸಿಗಳಿಗೆ ಮನೆ ಒದಗಿಸುವಂತೆ ಆಸ್ಕರ್ ಪ್ರಶಸ್ತಿ ವಿಜೇತ ಚಿತ್ರದ ಸ್ಟಾರ್ ದಂಪತಿ ಮನವಿ
ತೆಪ್ಪಕಾಡು ಆನೆ ಶಿಬಿರದಲ್ಲಿ ವಾಸಿಸುತ್ತಿರುವ ಎಲ್ಲಾ ಆದಿವಾಸಿಗಳಿಗೆ ಮನೆಗಳನ್ನು ಒದಗಿಸಿ ಮತ್ತು ಈ ಪ್ರದೇಶದ ಬುಡಕಟ್ಟು ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡುವಂತೆ ಆಸ್ಕರ್ ವಿಜೇತ ಸಾಕ್ಷ್ಯಚಿತ್ರ - ದಿ ಎಲಿಫೆಂಟ್ ವಿಸ್ಪರರ್ಸ್ನ ತಾರೆ ಬೆಳ್ಳಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಭಾನುವಾರ ಮನವಿ ಮಾಡಿದರು.