ಆಸ್ಕರ್ ಫರ್ನಾಂಡೀಸ್

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್‌ಗೆ ರಾಹುಲ್ ಗಾಂಧಿ ಅಂತಿಮ ನಮನ
ಕಳೆದ ಸೋಮವಾರ ಇಹಲೋಕ ತ್ಯಜಿಸಿದ ಕಾಂಗ್ರೆಸ್ ಪಕ್ಷದ ರಾಷ್ಟ್ರಮಟ್ಟದ ನಾಯಕ, ರಾಜ್ಯಸಭಾ ಸದಸ್ಯರ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಗುರುವಾರ ಬೆಂಗಳೂರಿನ ಅಶೋಕ ನಗರದ ಸೇಂಟ್ ಪ್ಯಾಟ್ರಿಕ್ ಚರ್ಚ್ ಆವರಣದಲ್ಲಿ ಕ್ರೈಸ್ತ ಧರ್ಮದ ವಿಧಿ-ವಿಧಾನಗಳು ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಮಂಗಳೂರು: ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್
ನಗರದ ಯೇನೆಪೋಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಗುರುವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಅಹ್ಮದ್ ಆಸ್ಪತ್ರೆಗೆ ಭೇಟಿ ನೀಡಿದರು.

ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿದ್ದು ,ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯಸಭೆಯಲ್ಲಿ ಕ್ಯಾನ್ಸರ್ ಗುಣಪಡಿಸಿದ 'ಗೋ ಮೂತ್ರ' ಕಥೆ ಹಂಚಿಕೊಂಡ ಆಸ್ಕರ್ ಫರ್ನಾಂಡಿಸ್
ಕಾಂಗ್ರೆಸ್ಸಿನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಗೋಮೂತ್ರದ ಉತ್ತಮ ಗುಣಗಳನ್ನು ಶ್ಲಾಘಿಸಿದ್ದು, ವ್ಯಕ್ತಿಯೊಬ್ಬರು ಗೋಮೂತ್ರ ಕುಡಿಯುವ ಮೂಲಕ ಕ್ಯಾನ್ಸರ್ ಗುಣಪಡಿಸಿಕೊಂಡ ಕಥೆಯನ್ನು ರಾಜ್ಯಸಭೆಯಲ್ಲಿ ಹೇಳಿಕೊಂಡರು.

