ರಾಜ್ಯಪಿಯು ಕಾಲೇಜುಗಳಲ್ಲಿ ಇನ್ನು ಮುಂದೆ ವಿದ್ಯಾರ್ಥಿಗಳಿಗೆ ಇಂಟರ್ನಲ್ ಮಾರ್ಕ್ಸ್: ಸರ್ಕಾರದ ಆದೇಶ
ಪಿಯು ಅಥವಾ ಪದವಿ ಪೂರ್ವ ಕಾಲೇಜುಗಳಲ್ಲಿ ಆಂತರಿಕ ಅಂಕಗಳ (Internal marks) ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ(DPUE) ನೀಡಿದ ಪ್ರಸ್ತಾವನೆಯನ್ನು ಅನುಸರಿಸಿ, ಒಂದು ವಿಷಯದಲ್ಲಿ ಒಟ್ಟು 100 ಅಂಕಗಳಲ್ಲಿ 20 ಅಂಕಗಳನ್ನು ಆಂತರಿಕ ಅಂಕಗಳಾಗಿ ಪರಿಗಣಿಸಿ ಸರ್ಕಾರ ಆದೇಶ ಹೊರಡಿಸಿದೆ.