ಇಂಧನ ಬೆಲೆ

ಮತ್ತೆ ಇಂಧನ ದರ ಏರಿಕೆ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ 7.5 ರೂ ಏರಿಕೆ!
ಮೇ 15ರಿಂದ ಆರಂಭವಾದ ಈ ಸರಣಿ ಏರಿಕೆಯಿಂದ ಒಟ್ಟಾರೆ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಸುಮಾರು ರೂ.7.5ರಷ್ಟು ಹೆಚ್ಚಳವಾಗಿರುವುದು ಸಾಮಾನ್ಯ ಜನರಲ್ಲಿ ಆತಂಕ ಮೂಡಿಸಿದೆ.

ಇಂಧನ ದರ ಏರಿಕೆ ನಿಯಂತ್ರಣ ಅಸಾಧ್ಯ, ಬಳಕೆದಾರರ ಮೇಲೆ ಹೊರೆ ಹೇರಿಕೆ ಅನಿವಾರ್ಯ: ಕೇಂದ್ರ ಸರ್ಕಾರ
ಕೆಲವು ದೇಶಗಳು ಈಗಾಗಲೇ ಈ ಹೆಚ್ಚಿದ ವೆಚ್ಚವನ್ನು ನೇರವಾಗಿ ಬಳಕೆದಾರರ ಮೇಲೆ ಹೇರುವುದನ್ನು ಪ್ರಾರಂಭಿಸಿವೆ, ಇನ್ನೂ ಕೆಲವು ದೇಶಗಳು ಅದನ್ನು ಮುಂದೂಡುತ್ತಿವೆ. ಆದರೆ, ಪೂರೈಕೆ ವ್ಯತ್ಯಯದ ಸಂದರ್ಭಗಳಲ್ಲಿ ಬೇಡಿಕೆ ನಿಯಂತ್ರಣ ಅಗತ್ಯವಾಗಿದೆ.

ಹಾರ್ಮುಜ್ ಜಲಸಂಧಿ ಮೇಲಿನ ನಿರ್ಬಂಧಗಳಿಗೆ ಭಾರಿ ಬೆಲೆ ತೆರಬೇಕಾಗುತ್ತದೆ; ಜಾಗತಿಕ ತೈಲ ಮಾರುಕಟ್ಟೆಗೆ ಇರಾನ್ ಎಚ್ಚರಿಕೆ!
ಇದೀಗ ಎಂಟನೇ ವಾರಕ್ಕೆ ಕಾಲಿಟ್ಟಿರುವ ಇರಾನ್ ಮೇಲಿನ ಅಮೆರಿಕ-ಇಸ್ರೇಲ್ ಯುದ್ಧವು ದಶಕಗಳಲ್ಲಿಯೇ ಅತ್ಯಂತ ಕೆಟ್ಟ ಜಾಗತಿಕ ಇಂಧನ ಬಿಕ್ಕಟ್ಟನ್ನು ಸೃಷ್ಟಿಸಿದೆ.

ತೈಲ ಬೆಲೆ ಏರಿಕೆಯಿಂದ ಖುಷಿಯಾಗಿದೆ, ಆದ್ರೆ ಯುದ್ಧ ನಿಂತರೆ 'ಭಾರಿ ಪ್ರಮಾಣದಲ್ಲಿ' ಇಳಿಕೆ: ಡೊನಾಲ್ಡ್ ಟ್ರಂಪ್
'ಇದು (ಇರಾನ್ ಜೊತೆಗಿನ ಯುದ್ಧ) ಮುಗಿದ ತಕ್ಷಣ ಇಂಧನ ಬೆಲೆ ದೊಡ್ಡ ಪ್ರಮಾಣದಲ್ಲಿ ಕುಸಿಯಲಿದೆ ಮತ್ತು ಇದು ಶೀಘ್ರದಲ್ಲೇ ಮುಗಿಯಬಹುದು ಎಂದು ನಾನು ಭಾವಿಸುತ್ತೇನೆ' ಎಂದರು.

ಬಾಂಗ್ಲಾದೇಶದಲ್ಲಿ ಇಂಧನ ದರ ಶೇ.50 ರಷ್ಟು ಏರಿಕೆ; ಇತಿಹಾಸದಲ್ಲೇ ದಾಖಲೆಯ ಬೆಲೆ ಏರಿಕೆ
ನೆರೆಯ ಬಾಂಗ್ಲಾದೇಶದಲ್ಲಿ ಇಂಧನ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಬಾಂಗ್ಲಾದೇಶ ಸರ್ಕಾರವು ಇಂಧನ ಬೆಲೆಯನ್ನು ಶೇಕಡಾ 51.7 ರಷ್ಟು ಹೆಚ್ಚಿಸಿದೆ. ಹೊಸ ಬೆಲೆಗಳು ಶನಿವಾರದಿಂದಲೇ ಜಾರಿಗೆ ಬಂದಿವೆ.

ಇಂಧನ ಬೆಲೆ ರೂ.50ಕ್ಕೆ ಇಳಿಯಬೇಕಾದರೆ ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಬೇಕು: ಸಂಜಯ್ ರಾವತ್
ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ಕ್ರಮವಾಗಿ 5, ಮತ್ತು 10 ರೂ.ನಷ್ಟು ಕೇಂದ್ರ ಸರ್ಕಾರ ಕಡಿತ ಮಾಡಿದ ಬೆನ್ನಲ್ಲೇ, ಗುರುವಾರ ಹೇಳಿಕೆ ನೀಡಿರುವ ಶಿವಸೇನಾ ಸಂಸದ ಸಂಜಯ್ ರಾವತ್, ಇಂಧನ ಬೆಲೆಯನ್ನು 50 ರೂ.ಗೆ ಇಳಿಸಲು ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಬೇಕು ಎಂದಿದ್ದಾರೆ.

ಉಚಿತ ಕೋವಿಡ್ ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ: ಕೇಂದ್ರ ಸಚಿವ ರಾಮೇಶ್ವರ್ ತೆಲಿ
ಉಚಿತವಾಗಿ ಕೋವಿಡ್–19 ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆಯ ರಾಜ್ಯ ಖಾತೆ ಸಚಿವ ರಾಮೇಶ್ವರ್ ತೆಲಿ ಪ್ರತಿಪಾದಿಸಿದ್ದಾರೆ.

ಅಮೆರಿಕ-ಇರಾನ್ ಸಂಘರ್ಷ; ತೈಲ ಬೆಲೆ ಮತ್ತೆ ಗಗನಕ್ಕೆ
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವಂತೆಯೇ ಇತ್ತ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆ ಮೇಲೆ ಇದರ ವ್ಯತಿರಿಕ್ತ ಪರಿಣಾಮ ಬೀರಿದ್ದು, ತೈಲ ಬೆಲೆ ಮತ್ತೆ ಗಗನದತ್ತ ಮುಖ ಮಾಡಿವೆ.

ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್ ಗೆ 1 ರು. ಇಳಿಕೆ: ಮಮತಾ ಬ್ಯಾನರ್ಜಿ ಘೋಷಣೆ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರಗಳನ್ನು 1 ರು. ಕಡಿತಗೊಳಿಸಿ ಆದೇಶಿಸಿದ್ದಾರೆ.

