ದೇಶಗೋವುಗಳನ್ನು ಕಸಾಯಿಖಾನೆಗೆ ಮಾರುವ ಮೂಲಕ ಇಸ್ಕಾನ್ ಅತಿದೊಡ್ಡ ವಂಚನೆ; ಮನೇಕಾ ಗಾಂಧಿ ಆರೋಪ ತಳ್ಳಿಹಾಕಿದ ಇಸ್ಕಾನ್
ಗೋವುಗಳ ಸಾಕಣೆ ಹೆಸರಲ್ಲಿ ಅವುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವ ಮೂಲಕ ಭಾರತದಲ್ಲಿ ಅತಿದೊಡ್ಡ ವಂಚನೆಯನ್ನು ಅಂತರರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್) ನಡೆಸುತ್ತಿದೆ ಎಂಬ ಬಿಜೆಪಿ ಸಂಸದೆ ಮನೇಕಾ ಗಾಂಧಿ ಆರೋಪಗಳನ್ನು ಇಸ್ಕಾನ್ ರಾಷ್ಟ್ರೀಯ ವಕ್ತಾರ ಯುಧಿಷ್ಟಿರ ಗೋವಿಂದ ದಾಸ್ ತಳ್ಳಿಹಾಕಿದ್ದಾರೆ.