ಈದ್ಗಾ ಮೈದಾನ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಇಲ್ಲ!
ವಿವಾದಿತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಈ ಬಾರಿ ಅನುಮತಿ ನಿರಾಕರಿಸಲಾಗಿದೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹೈಕೋರ್ಟ್ ಅಸ್ತು; ಅಂಜುಮನ್ ಅರ್ಜಿ ವಜಾ
ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗಣೇಶ ಚತುರ್ಥಿ ಹಬ್ಬ ಆಚರಣೆ ವಿರೋಧಿಸಿ ಅಂಜುಮನ್-ಎ-ಇಸ್ಲಾಂ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ಶುಕ್ರವಾರ ವಜಾಗೊಳಿಸಿದೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಅನುಮತಿಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ, ಗೃಹ ಸಚಿವರು ಹೇಳಿದ್ದು ಹೀಗೆ...
ರಾಣಿ ಚನ್ನಮ್ಮ ಮೈದಾನ (ಈದ್ಗಾ)ದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಕುರಿತು ಪ್ರಚೋದನಕಾರಿ ಹೇಳಿಕೆ: ಮುತಾಲಿಕ್ ಗಡಿಪಾರಿಗೆ ಎಸ್‌ಡಿಪಿಐ ಆಗ್ರಹ
ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ಗಡಿಪಾರು ಮಾಡುವಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಆಗ್ರಹಿಸಿದೆ.

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ವಿಚಾರ; ಸರ್ಕಾರದ ಪಾತ್ರವಿಲ್ಲ ಎಂದ ಗೃಹ ಸಚಿವ ಪರಮೇಶ್ವರ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಿರ್ಧಾರವನ್ನು ಅಲ್ಲಿನ ಪಾಲಿಕೆ ಕೈಗೊಳ್ಳಲಿದ್ದು, ಇದರಲ್ಲಿ ಸರ್ಕಾರದ ಪಾತ್ರವಿರುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಶುಕ್ರವಾರ ಹೇಳಿದರು.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಒತ್ತಾಯ
ಗಣೇಶ ಚತುರ್ಥಿ ಹಬ್ಬ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅವಕಾಶ ನೀಡಬೇಕೆಂಬ ಆಗ್ರಹಗಳು ವ್ಯಕ್ತವಾಗತೊಡಗಿವೆ.

ಬಕ್ರೀದ್ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿದ್ದರಾಮಯ್ಯ ಭಾಗಿ; ದ್ವೇಷ ಸೃಷ್ಟಿಸಲು ಬಯಸುವವರಿಗೆ ಪ್ರಾಮುಖ್ಯತೆ ನೀಡಬೇಕಿಲ್ಲ ಎಂದ ಸಿಎಂ
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್-ಅಲ್-ಅಧಾ ಹಬ್ಬವನ್ನು ಇಂದು ಗುರುವಾರ ದೇಶಾದ್ಯಂತ ಬಕ್ರೀದ್ ಎಂದು ಭಕ್ತಿ, ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಖಾನ್ ಅವರ ಜೊತೆಗೆ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

ಮುಸಲ್ಮಾನರ ಪವಿತ್ರ ಹಬ್ಬ ಬಕ್ರೀದ್: ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಅದ್ದೂರಿ ಆಚರಣೆ, ಬಿಗಿ ಪೊಲೀಸರ ಭದ್ರತೆ
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ (Idgah Maidan ) ಇಂದು ಗುರುವಾರ ಮುಸ್ಲಿಂ ಬಾಂಧವರು ಬಕ್ರೀದ್ ಆಚರಿಸಲು ಯಾವುದೇ ಸಮಸ್ಯೆಗಳಿಲ್ಲ. ಕಳೆದ ವರ್ಷ ಈದ್ಗಾ ಮೈದಾನದ ಮಾಲೀಕತ್ವ ವಿವಾದ ತೀವ್ರವಾಗಿ ತಲೆದೋರಿತ್ತು.

ಬಕ್ರೀದ್ ಹಬ್ಬಕ್ಕೆ ಸಿದ್ಧತೆ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ವ್ಯಾಪಾರ ಜೋರು
ಬಕ್ರೀದ್ ಹಬ್ಬ ಹತ್ತಿರಬರುತ್ತಿದ್ದು, ಈ ನಡುವಲ್ಲೇ ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಟಗರು, ಕುರಿ ಹಾಗೂ ಮೇಕೆಗಳ ಮಾರಾಟ ಬಿರುಸುಗೊಂಡಿದೆ.

