ದೇಶಪ್ರಧಾನಿ ಮೋದಿ ಜೊತೆಗೆ ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ ದೂರವಾಣಿ ಮಾತುಕತೆ
ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ ಸೋಮವಾರ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಜಿ-20 ಶೃಂಗಸಭೆಯ ಅಧ್ಯಕ್ಷ ಸ್ಥಾನ ಪಡೆದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಝೆಲೆನ್ಸ್ಕಿ ಅಭಿನಂದಿಸಿದ್ದು, ಭಾರತ ಶಾಂತಿ ಸೂತ್ರದ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.