ದೇಶಬಾರಾಮುಲ್ಲಾದಲ್ಲಿ ಉಗ್ರರ ಅಡಗುತಾಣ ಪತ್ತೆ: ಶಸ್ತ್ರಾಸ್ತ್ರ,ಮದ್ದು ಗುಂಡು ವಶ
ಉತ್ತರ ಕಾಶ್ಮೀರ ಜಿಲ್ಲೆಯಾದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಉಗ್ರರ ಅಡಗುತಾಣ ಪತ್ತೆ ಮಾಡಿ, ಸ್ಥಳದಿಂದ ಗ್ರೆನೇಡ್, ಪಿಸ್ತೂಲ್, ಸ್ಫೋಟಕ ವಸ್ತುಗಳು ಮತ್ತು ಪಾಕ್ ಕರೆನ್ಸಿ ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.