ಉಚಿತ ಚಿಕಿತ್ಸೆ

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿಗೆ ಅನಾರೋಗ್ಯ: ಜೀವನ ಪರ್ಯಂತ ಉಚಿತ ಚಿಕಿತ್ಸೆ ಘೋಷಿಸಿದ ಆಸ್ಪತ್ರೆ!
ಈ ಬಗ್ಗೆ ಮಾಹಿತಿ ನೀಡಿರುವ ಆಕೃತಿ ಆಸ್ಪತ್ರೆಯ ಡಾ.ವಿವೇಕ್ ತ್ರಿವೇದಿ, ಕಾಂಬ್ಳಿ ಅವರ ಜೀವನ ಪರ್ಯಂತ ಚಿಕಿತ್ಸೆ ಉಚಿತವಾಗಿರುತ್ತಿದೆ ಎಂದು ಘೋಷಿಸಿದರು.

ಹಿರಿಯ ನಾಗರಿಕರಿಗೆ ಬಂಪರ್: ದೆಹಲಿಯ ಎಲ್ಲ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ!
ಮುಂದಿನ ವರ್ಷದ ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಆಮ್ ಆದ್ಮಿ ಪಕ್ಷ (ಎಎಪಿ) ಇಂದು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆಯನ್ನು ಘೋಷಿಸಿದೆ.

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 10 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ರಾಹುಲ್ ಗಾಂಧಿ
ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರ ಉಳಿಸಿಕೊಂಡರೆ ಛತ್ತೀಸ್‌ಗಢದಲ್ಲಿ ಅಸ್ತಿತ್ವದಲ್ಲಿರುವ ಆರೋಗ್ಯ ವಿಮೆ ಯೋಜನೆಯಡಿ ಬಡವರಿಗೆ 10 ಲಕ್ಷ ರೂಪಾಯಿವರೆಗೆ ಉಚಿತ ವೈದ್ಯಕೀಯ...

ದೇಗುಲದ ಬಾವಿಯ ಛಾವಣಿ ಕುಸಿತ ಪ್ರಕರಣ: ಮೃತರ ಸಂಖ್ಯೆ 36ಕ್ಕೆ ಏರಿಕೆ, ಸ್ಥಳಕ್ಕೆ ಸಿಎಂ ಚೌಹಾಣ್ ಭೇಟಿ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ ಭರವಸೆ!
ಇಂದೋರ್'ನ ದೇವಸ್ಥಾನವೊಂದರ ಮೆಟ್ಟಿಲು ಬಾವಿ ಕುಸಿತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 36ಕ್ಕೆ ಏರಿಕೆಯಾಗಿದ್ದು, ಘಟನಾ ಸ್ಥಳಕ್ಕೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಭೇಟಿ ನೀಡಿ, ಶುಕ್ರವಾರ ಪರಿಶೀಲನೆ ನಡಸಿದ್ದಾರೆ.

ಉಚಿತ ಶಿಕ್ಷಣ, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ವಿರೋಧಿ ವಾತಾವರಣ ಸೃಷ್ಟಿಸಲಾಗುತ್ತಿದೆ: ಕೇಜ್ರಿವಾಲ್
ಸ್ವಾತಂತ್ರ್ಯದ 75ನೇ ವರ್ಷದಲ್ಲಿ ಉಚಿತ ಸರ್ಕಾರಿ ಕಲ್ಯಾಣ ಯೋಜನೆಗಳನ್ನು ಬಲಪಡಿಸುವ ಬದಲು ಫ್ರೀಬಿಸ್ ಎಂದು ಹೇಳುವ ಮೂಲಕ ಅವುಗಳ ವಿರೋಧಿ ವಾತಾವರಣ ನಿರ್ಮಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ...

ಉತ್ತರಪ್ರದೇಶ ಚುನಾವಣೆ: ಜನತೆಗೆ ರೂ.10 ಲಕ್ಷದವರೆಗೆ ಉಚಿತ ಚಿಕಿತ್ಸೆ ಭರವಸೆ ನೀಡಿದ ಪ್ರಿಯಾಂಕಾ ಗಾಂಧಿ
ಉತ್ತರ ಪ್ರದೇಶದಲ್ಲಿ ಚುನಾವಣೆಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಮತದಾರರಿಗೆ ಆಶ್ವಾಸನೆಗಳನ್ನ ನೀಡೋದ್ರಲ್ಲಿ ಬ್ಯುಸಿ ಆಗಿವೆ. ಅದರಂತೆ.. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತಂದರೆ, ಅನಾರೋಗ್ಯ ಪೀಡಿತ ವ್ಯಕ್ತಿಗೆ 10 ಲಕ್ಷ ರೂಪಾಯಿ ವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು...

ಬ್ಲ್ಯಾಕ್ ಫಂಗಸ್ ಗೆ ಉಚಿತ ಚಿಕಿತ್ಸೆ ನೀಡುವ ಕುರಿತು ನಿರ್ಧಾರ ಕೈಗೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಹೆಚ್ಚಳ ಆಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಈ ರೋಗದ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವ ಕುರಿತು ನಿರ್ಧಾರ ಕೈಗೊಳ್ಳುವಲಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ವೈದ್ಯಕೀಯ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಿ: ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ
ಬ್ಲ್ಯಾಕ್ ಫಂಗಸ್ (ಮ್ಯೂಕೋರ್ಮೈಕೋಸಿಸ್) ಗೆ ತುತ್ತಾದವರಿಗೆ ಉಚಿತವಾಗಿ ಅಗತ್ಯ ವೈದ್ಯಕೀಯ ಸೌಲಭ್ಯಗಳೊಂದಿಗೆ ಚಿಕಿತ್ಸೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.

ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ: ಸಿಎಂ ಯಡಿಯೂರಪ್ಪ ಘೋಷಣೆ
ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

