ಉಡುಪಿ ಕ್ರೈಂ

ಉಡುಪಿ: ಯೋಗೀಶ್ ಪೂಜಾರಿ ಕೊಲೆ; ಕುಖ್ಯಾತ ರೌಡಿಶೀಟರ್ ಸೇರಿ ನಾಲ್ವರ ಬಂಧನ
ಉಡುಪಿ ಜಿಲ್ಲೆ ತೆಂಕನಿಡಿಯೂರು ಲಕ್ಷ್ಮೀನಗರ ನಿವಾಸಿ ಯೋಗೀಶ್ ಪೂಜಾರಿ (26) ಹತ್ಯೆಯಲ್ಲಿ ಭಾಗಿಯಾದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಮಲ್ಪೆ ಪೋಲೀಸರು ಬಂಧಿಸಿದ್ದಾರೆ.

ಎನ್‌ಆರ್‌ಐ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: 4 ವರ್ಷದ ನಂತರ ಷರತ್ತುಬದ್ದ ಜಾಮೀನು ಪಡೆದ ಆರೋಪಿ ನಿರಂಜನ್ ಭಟ್
ನಾಲ್ಕು ವರ್ಷಗಳ ಹಿಂದೆ ಕರಾವಳಿ ಭಾಗದಲ್ಲಿ ಸಂಚಲನ ಸೃಷ್ಟಿಸಿದ್ದ ಎನ್‌ಆರ್‌ಐ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ನಿರಂಜನ್ ಭಟ್ ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ದೊರಕಿದೆ. ಉಡುಪಿ ಜಿಲ್ಲಾ ನ್ಯಾಯಾಲಯವು ಆರೋಪಿಗೆ ಜಾಮೀನು ನೀಡಿದೆ.

ಕಾರ್ಕಳ: ಅಪ್ರಾಪ್ತ ಬಾಲಕನೊಡನೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ವ್ಯಕ್ತಿ ಸೆರೆ
ಅಪ್ರಾಪ್ತ ಬಾಲಕನೊಂದಿಗೆ ಇಚ್ಚೆಗೆ ವಿರುದ್ಧವಾಗಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಡೆದಿದೆ.

