ರಾಜ್ಯಕೋವಿಡ್ -19: ಶಂಕಿತ ರೋಗಿಗಳನ್ನು ದಾಖಲಿಸಿಕೊಳ್ಳುವಂತೆ ಉಡುಪಿ ಜಿಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಸೂಚನೆ
ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಖಾಸಗಿ ಆಸ್ಪತ್ರೆಗಳಿಗಳಲ್ಲಿ ಎರಡು ಹಾಸಿಗೆಯೊಂದಿಗಿನ ಪ್ರತ್ಯೇಕ ವಾರ್ಡ್ಗಳನ್ನು ವ್ಯವಸ್ಥೆ ಮಾಡುವಂತೆ ಸೂಚಿಸಿರುವ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು, ಕೋವಿಡ್ -19 (ಕೊರೊನವೈರಸ್) ರೋಗಲಕ್ಷಣಗಳನ್ನು ಹೊಂದಿರುವ ಜನರು ಆಸ್ಪತ್ರೆಗೆ ಬಂದರೆ ನಿರಾಕರಿಸದೆ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದ್ದಾರೆ.