ರಾಜ್ಯಉಡುಪಿ, ಚಿಕ್ಕಮಗಳೂರು, ಬೆಂಗಳೂರಿನಲ್ಲಿ ಭಾರೀ ಮಳೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ
ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಉಡುಪಿ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ,ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸುವುದು ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ.