ಉತ್ತರ ಕರ್ನಾಟಕ

ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಅನ್ಯಾಯವಾದರೆ ಸುಮ್ಮನಿರಲ್ಲ: ಸ್ಪೀಕರ್ ಜಿ.ಎಸ್ ಪಾಟೀಲ್
ರಾಜ್ಯ ಸರ್ಕಾರ ಬರ ಪರಿಸ್ಥಿತಿ ಕುರಿತು ಸಮೀಕ್ಷೆ ನಡೆಸಿದೆ. ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳ ಅನೇಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ, ಉತ್ತರ ಕರ್ನಾಟಕದ ಹಲವು ತಾಲೂಕುಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

'ಚಿಂತೆ ಬೇಡ, ನಿಮ್ಮೊಂದಿಗೆ ಮಾತನಾಡದೆ ನಾವು ಹೋಗುವುದಿಲ್ಲ': ಪ್ರವಾಸದ ವೇಳೆ ಸಿಎಂ ಡಿ.ಕೆ ಶಿವಕುಮಾರ್ ಅಭಯ
ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಶಿವಕುಮಾರ್ ಎಚ್ಚರಿಕೆ ನೀಡಿದರು.

ಬಿರುಬಿಸಿಲಿಗೆ ಕಲಬುರಗಿ ಕಂಗಾಲು: 45 ಡಿಗ್ರಿ ತಲುಪಿದ ತಾಪಮಾನ; ಆರೆಂಜ್ ಅಲರ್ಟ್ ಘೋಷಣೆ
ರಾಜ್ಯದ ಹಲವೆಡೆ 42 ಡಿಗ್ರಿಗಿಂತ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 24 ಸ್ಥಳಗಳಲ್ಲಿ 42 ಡಿಗ್ರಿಗಿಂತ ಹೆಚ್ಚು ತಾಪಮಾನ ದಾಖಲಾಗಿದ್ದರೆ, ರಾಯಚೂರಿನಲ್ಲಿ 22, ಬೀದರ್‌ನಲ್ಲಿ 18, ವಿಜಯಪುರದಲ್ಲಿ 14, ಯಾದಗಿರಿಯಲ್ಲಿ 11 ಮತ್ತು ಬಾಗಲಕೋಟೆಯಲ್ಲಿ 7 ಸ್ಥಳಗಳಲ್ಲಿ ಉಷ್ಣಾಂಶ 42 ಡಿಗ್ರಿ ಮೀರಿದೆ.

'ಉತ್ತರ'ದತ್ತ ಜೆಡಿಎಸ್ ಚಿತ್ತ: ಕಳೆದು ಹೋದ ಪಕ್ಷದ ರಾಜಕೀಯ ಗತ ವೈಭವ ಮರಳಿಸಲು 'ದಳಪತಿ'ಗಳ ದಂಡಯಾತ್ರೆ!
ಪ್ರಾದೇಶಿಕ ಪಕ್ಷವು ಹಳೆಯ ಮೈಸೂರು ಪ್ರದೇಶದಲ್ಲಿ ಸಾಕಷ್ಟು ಪ್ರಾಬಲ್ಯ ಉಳಿಸಿಕೊಂಡಿದ್ದರೂ, ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪ್ರಭಾವ ತೀವ್ರವಾಗಿ ಕಡಿಮೆಯಾಗಿದೆ. ಇಂದು ವಿಧಾನಸಭೆಯಲ್ಲಿರುವ ಪಕ್ಷದ 18 ಶಾಸಕರಲ್ಲಿ, ಕೇವಲ ನಾಲ್ವರು ಶಾಸಕರು ಮಾತ್ರ ಈ ಪ್ರದೇಶದವರಾಗಿದ್ದಾರೆ.

ಉತ್ತರ ಕರ್ನಾಟಕ ಅಭಿವೃದ್ಧಿಯಾಗದಿರುವುದು ಸರ್ಕಾರದ ವೈಫಲ್ಯ: ವಿಪಕ್ಷ ನಾಯಕ ಆರ್. ಅಶೋಕ್
ಇತ್ತೀಚಿನ ವಿಧಾನಸಭಾ ಅಧಿವೇಶನದಲ್ಲೇ ಉತ್ತರ ಕರ್ನಾಟಕದ ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಭಾಗದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ ಎಂದು ಕೆಲವು ಕಾಂಗ್ರೆಸ್ ಶಾಸಕರು ಪ್ರತ್ಯೇಕ ರಾಜ್ಯದ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ.

ಚಳಿಗಾಲದ ಅಧಿವೇಶನ ಸಂಪನ್ನ: ಉತ್ತರ ಕರ್ನಾಟಕ ಅಭಿವೃದ್ಧಿಗೆ ಗಣನೀಯ ಅನುದಾನ; ವಿಪಕ್ಷಗಳ ಗದ್ದಲದ ನಡುವೆಯೆ ಮಸೂದೆಗಳ ಅಂಗೀಕಾರ
ಈ ನಡುವೆ ಶಾಸಕ ಮಹೇಶ ಟೆಂಗಿನಕಾಯಿ ಸದನದ ಮೂರನೇ ದಿನ ಪ್ರಸ್ತಾಪಿಸಿದ ಗೃಹಲಕ್ಷ್ಮಿ ಯೋಜನೆ ಎರಡು ಕಂತು ಬಾಕಿ ಸರ್ಕಾರವನ್ನು ಅಕ್ಷರಶಃ ನಡುಗಿಸಿತು. ಕೊನೆಗೆ ಸರ್ಕಾರದ ಪರ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಸದನಕ್ಕೆ ಕ್ಷಮೆ ಕೇಳಿದ್ದು ಸರ್ಕಾರವನ್ನು ಮುಜುಗರಕ್ಕೀಡು ಮಾಡಿತು.

ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ
ಬೆಳಗಾವಿಯಲ್ಲಿ ನಡೆದ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಕೊನೆಯ ದಿನ ಉತ್ತರ ಕರ್ನಾಟಕದ ಅಭಿವೃದ್ಧಿಯ ಕುರಿತಾದ ಚರ್ಚೆಗೆ ಉತ್ತರಿಸಿದ ಸಿಎಂ, ಬಿಜೆಪಿ ನೇತೃತ್ವದ ವಿರೋಧ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.

ಉತ್ತರ ಕರ್ನಾಟಕಕ್ಕೆ 3,500 ಕೋಟಿ ರೂ ಪ್ಯಾಕೇಜ್: ಸಚಿವ ಸಂಪುಟ ಅನುಮೋದನೆ
ಉತ್ತರ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ನೀಡಲು ಪರಿಷ್ಕೃತ ಯೋಜನೆ ಸೇರಿ ಒಟ್ಟು 3,500 ಕೋಟಿ ರು.ಗೂ ಹೆಚ್ಚು ಮೊತ್ತದ ಯೋಜನೆಗಳಿಗೆ ಆಡಳಿತಾತ್ಮಕ ಮಂಜೂರಾತಿ ಪಡೆಯಲಾಗಿದೆ.

ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಿ: ರಾಜ್ಯ ಸರ್ಕಾರಕ್ಕೆ ಶಾಸಕರ ಆಗ್ರಹ
ದಕ್ಷಿಣ ಕರ್ನಾಟಕದಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ ನನಗೆ ಯಾವುದೇ ರೀತಿಯ ಅಸೂಯೆ ಇಲ್ಲ. ಆದರೆ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡದಿರುವುದು ಕಳವಳ ತಂದಿದೆ.

