ರಾಜ್ಯಬೆಂಗಳೂರು: ಖಾಸಗಿ ಶಿಕ್ಷಣ ಸಂಸ್ಥೆಗಳ ನಿಯಂತ್ರಣಕ್ಕೆ ಶಿಕ್ಷಣ ಸಚಿವರಿಗೆ ಮನವಿ
ಕೊರೊನಾ ಸಂಕಷ್ಟದ ಸಮಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶ ಹಾಗೂ ಆನ್ ಲೈನ್ ಶುಲ್ಕ ಪಾವತಿಸುವಂತೆ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ನೇತೃತ್ವದ ನಿಯೋಗ, ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದೆ.