ರಾಜ್ಯರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಮೂಲ ಪತ್ತೆ ಹಚ್ಚಲು ಡಿಸಿಎಂ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಸೂಚನೆ
ಕೋವಿಡ್-19 ಸೋಂಕಿನಿಂದ ಗುಣಮುಖರಾದವರಲ್ಲಿ ಕಾಣಿಸಿಕೊಳ್ಳುತ್ತಿರುವ ಅಪಾಯಕಾರಿ ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಮೂಲವನ್ನು ಪತ್ತೆ ಹಚ್ಚಲು ಸುಪ್ರಸಿದ್ಧ ವೈದ್ಯರು ಹಾಗೂ ಸೂಕ್ಷ್ಮಾಣುಜೀವಿ ತಜ್ಞರಿಗೆ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ನಿರ್ದೇಶನ ನೀಡಿದ್ದಾರೆ.