ರಾಜಕೀಯ‘ನಾನು ಪ್ರಸ್ತಾಪಿಸಿದ್ದರಲ್ಲಿ ತಪ್ಪಿಲ್ಲ’: ಮೂವರು ಉಪಮುಖ್ಯಮಂತ್ರಿಗಳ ನೇಮಕ ಪರ ಸಚಿವ ಕೆಎನ್ ರಾಜಣ್ಣ ಮತ್ತೆ ಬ್ಯಾಟಿಂಗ್!
ಮೂವರು ಉಪಮುಖ್ಯಮಂತ್ರಿಗಳ ಆಯ್ಕೆಯ ತಮ್ಮ ನಿಲುವನ್ನು ಪುನರುಚ್ಚರಿಸಿದ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು, 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ತಾವು ಈ ವಿಷಯವನ್ನು ಪ್ರಸ್ತಾಪಿಸಿದ್ದೇನೆ. ನನ್ನ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.