ರಾಜ್ಯಜನತಾ ದರ್ಶನ ಕಾರ್ಯಕ್ರಮದಲ್ಲಿ ಗದ್ದಲ: ಕೋಲಾರ ಎಸ್ಪಿ ವಿರುದ್ದ ಹಕ್ಕುಚ್ಯುತಿ ಮಂಡಿಸುತ್ತೇನೆ: ಸಂಸದ ಎಸ್ ಮುನಿಸ್ವಾಮಿ
ಕೋಲಾರದಲ್ಲಿ ಮಂಗಳವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನನ್ನನ್ನು ಹೊರಗೆ ತಳ್ಳಿ ಶಿಷ್ಟಾಚಾರ ಉಲ್ಲಂಘಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಲೋಕಸಭೆ ಸ್ಪೀಕರ್ಗೆ ಅರ್ಜಿ ಸಲ್ಲಿಸುವುದಾಗಿ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ತಿಳಿಸಿದರು.