ದೇಶಎಐಸಿಸಿ ಅಧ್ಯಕ್ಷರ ಆಯ್ಕೆಗೆ ಮ್ಯಾಚ್ ಫಿಕ್ಸಿಂಗ್?: ಅವಿರೋಧ ಆಯ್ಕೆ ಮಾಡಲು ಪಿಸಿಸಿಗಳಿಗೆ ಸೂಚನೆ; ಪಾರದರ್ಶಕ ಚುನಾವಣೆಗಾಗಿ ಕಾಯುತ್ತಿದ್ದವರಿಗೆ ಶಾಕ್!
ಕಾಂಗ್ರೆಸ್ನ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ರಾಹುಲ್ ಗಾಂಧಿ ನಿರಾಸಕ್ತಿ ಹೊಂದಿರುವ ಕಾರಣ ಚುನಾವಣೆ ಮೂಲಕ ಅಧ್ಯಕ್ಷರನ್ನು ಆರಿಸುವ ಸಿದ್ಧತೆ ನಡೆದಿದೆ. ಆದರೆ ಎಐಸಿಸಿ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡುವಂತೆ ಕೇಂದ್ರ ಕಾಂಗ್ರೆಸ್ ನಾಯಕತ್ವ ಸೂಚಿಸಿರುವುದು ಪಾರದರ್ಶಕ ಸಾಂಸ್ಥಿಕ ಚುನಾವಣೆಗೆ ಬೇಡಿಕೆ ಇಟ್ಟಿರುವವರಿಗೆ ಆಘಾತವನ್ನುಂಟು ಮಾಡಿದೆ.