ಕ್ರಿಕೆಟ್ಮೊಹಮ್ಮದ್ ಅಜರುದ್ದೀನ್ಗೆ ಮತ್ತೆ ಸಂಕಷ್ಟ: ಮತ್ತೊಂದು ಎಫ್ಐಆರ್ ದಾಖಲು!
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಸಂಸ್ಥೆಯ ನಿಧಿ ದುರುಪಯೋಗದ ಆರೋಪದ ಮೇಲೆ ಅಜರುದ್ದೀನ್ ಮತ್ತು ಹೈದರಾಬಾದ್ ಕ್ರಿಕೆಟ್ ಸಂಸ್ಥೆ(ಎಚ್ಸಿಎ)ನ ಕೆಲವು ಮಾಜಿ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.