ರಾಜ್ಯಅಬಕಾರಿ ಇಲಾಖೆ ಸಿಬ್ಬಂದಿಗೆ ಗುಡ್ ನ್ಯೂಸ್! ಶೀಘ್ರವೇ ವೇತನ ಹೆಚ್ಚಳಕ್ಕೆ ಪ್ರಸ್ತಾಪ: ಸಚಿವ ಎಚ್.ನಾಗೇಶ್
ರಾಘವೇಂದ್ರ ಔರಾದ್ಕರ್ ಸಮಿತಿಯ ಶಿಫಾರಸುಗಳ ಪ್ರಕಾರ ವೇತನ ಹೆಚ್ಚಳ ಪಡೆದ ಹೆಚ್ಚಿನ ಪೊಲೀಸ್ ಸಿಬ್ಬಂದಿ ಈಗ ಹೆಚ್ಚಳದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದರೆ, ಇತ್ತ ಅಬಕಾರಿ ಇಲಾಖೆ ಪೊಲೀಸ್ ಇಲಾಖೆಗೆ ಸಮನಾಗಿ ವೇತನ ಪರಿಷ್ಕರಣೆ ಮಾಡುವ ಪ್ರಸ್ತಾಪ ಇಟ್ಟಿದೆ.