ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್

ನಾಳೆ ದೆಹಲಿಯಲ್ಲಿ INDIA ಬಣ ನಾಯಕರ ಸಭೆ-ಶರದ್ ಪವಾರ್
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ನಿರೀಕ್ಷಿತ ಸ್ಥಾನಗಳಲ್ಲಿ ಗೆಲುವು ಸಾಧಿಸುವಲ್ಲಿ ವಿಫಲವಾಗಿದ್ದು, ಸರ್ಕಾರ ರಚನೆಯಲ್ಲಿ ಜೆಡಿಯು ನಾಯಕ ನಿತೀಶ್ ಕುಮಾರ್ ಹಾಗೂ ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಅವರ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸೆಳೆಯಲು ಬಿಜೆಪಿ ಹಾಗೂ ವಿಪಕ್ಷಗಳ ಮೈತ್ರಿಕೂಟದ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಜುಲೈ 13 ರಿಂದ ಎರಡು ದಿನ ವಿಪಕ್ಷಗಳ ಮುಂದಿನ ಸಭೆ: ಶರದ್ ಪವಾರ್
ಮುಂದಿನ ವಿಪಕ್ಷಗಳ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಹಿಂದೆ ಶಿಮ್ಸಾದಲ್ಲಿ ಸಭೆ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಜುಲೈ 13 ರಿಂದ ಎರಡು ದಿನ ಮುಂದಿನ ಸಭೆ ಜರುಗಲಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ. ಇದು ವಿರೋಧ ಪಕ್ಷಗಳ ಎರಡನೇ ಸಭೆಯಾಗಿದೆ.

ಪುಣೆಯಲ್ಲಿ ಭಾನುವಾರ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ರಿಂದ ಸಿಎಂ ಸಿದ್ದರಾಮಯ್ಯಗೆ ಸನ್ಮಾನ
ಎನ್‌ಸಿಪಿ ಮುಖ್ಯಸ್ಥ ಮತ್ತು ರಾಜ್ಯಸಭಾ ಸದಸ್ಯ ಶರದ್ ಪವಾರ್ ನೇತೃತ್ವದಲ್ಲಿ ಧಂಗರ್ ಸಮುದಾಯವು ಭಾನುವಾರ ಪುಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಿದೆ ಎಂದು ಸಿಎಂ ಕಚೇರಿ ಅಧಿಕೃತ ಪ್ರಕಟಣೆ ತಿಳಿಸಿದೆ. ದೊರೆ ಅಹಲ್ಯಾದೇವಿ ಜನ್ಮದಿನದ ಸಂದರ್ಭದಲ್ಲಿ ಈ ಸನ್ಮಾನ ನಡೆಯಲಿದೆ.

ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ನೋಡಿದ ಮೇಲೆ ನಾನು ಹೋಗದೇ ಇದ್ದುದ್ದಕ್ಕೆ ಸಂತೋಷ ಪಡುತ್ತೇನೆ: ಶರದ್ ಪವಾರ್
ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗದೇ ಇದ್ದುದ್ದಕ್ಕೆ ಸಂತೋಷವಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

